ಚಿಕ್ಕಮಗಳೂರು | ಅನೈತಿಕ ಪೊಲೀಸ್‌ಗಿರಿ: ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಯುವಕನ ಮೇಲೆ ಹಲ್ಲೆ; ನಾಲ್ವರ ಬಂಧನ

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಮಂಗಳವಾರ ಸಂಜೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿರುವುದು ವರದಿಯಾಗಿದೆ. ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಮುಸ್ಲಿಂ ಯುವಕನೋರ್ವನ ಮೇಲೆ ಗುಂಪೊಂದು ‌ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

- Advertisement -

ಮಂಗಳವಾರ ಸಂಜೆ ವೇಳೆ ಹಿಂದೂ ಯುವತಿಯೋರ್ವಳಿಗೆ ಡೈರಿ ಮಿಲ್ಕ್ ಚಾಕ್ಲೆಟ್ ಕೊಡುತ್ತಿದ್ದ ಎಂಬ ಕಾರಣವೊಡ್ಡಿ ಬಣಕಲ್ ಮೂಲದ ಮುಸ್ಲಿಂ ಯುವಕನಿಗೆ ಮತ್ತೊಂದು ಯುವಕರ‌ ಗುಂಪು ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಕಾರಿನಲ್ಲಿ ಬಂದ ನಾಲ್ವರು ಯುವಕರು, ಹಲ್ಲೆ ನಡೆಸಿದ್ದಾರೆ. ಘಟನೆಯ ಬಗ್ಗೆ ಕೂಡಲೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಅಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿದ ಪಿಎಸೈ ಮತ್ತು ಸಿಬ್ಬಂದಿ ಮುಂದಾಗುವ ಅನಾಹುತ ತಪ್ಪಿಸಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ನಾಲ್ವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ‌ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಎರಡು ಎಫ್‌ಐಆರ್ ದಾಖಲು
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವಕನೋರ್ವನ ಮೇಲೆ ನಡೆದ ಅನೈತಿಕ ಪೊಲೀಸ್‌ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ಇಲಾಖೆ ಮಾಹಿತಿ ನೀಡಿದ್ದು, ಐಪಿಸಿ ಸೆಕ್ಷನ್ 143, 144, 148, 323, 324, 504, 506, 1490 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದೆ. ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...