ಚಿಕ್ಕಮಗಳೂರು | ಲೈಂಗಿಕ ದೌರ್ಜನ್ಯ: ಮೆಡಿಕಲ್ ಕಾಲೇಜು​ ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ದೂರು

Date:

ಚಿಕ್ಕಮಗಳೂರಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರೊ. ಗಂಗಾಧರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಗಂಗಾಧರ್ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಗಂಭೀರ ಆರೋಪ ಮಾಡಿದ್ದು, ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ದೂರು ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿ, “2023ರಲ್ಲಿ ಪ್ರೊ. ಗಂಗಾಧರ್ ಅವರು ನನಗೆ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದರು. ನನ್ನೊಂದಿಗೆ ಸಹಕರಿಸು ಎಂದು ಹೇಳುತ್ತಿದ್ದರು. ತಮ್ಮ ಚೇಂಬರ್‌ಗೆ ಬರುವಂತೆ ಪದೇ-ಪದೇ ಪೀಡಿಸುತ್ತಿದ್ದರು. ಗಂಗಾಧರ್ ನೀಡುತ್ತಿದ್ದ ಕಿರುಕುಳದ ಬಗ್ಗೆ ಡೀನ್ ಅವರ ಗಮನಕ್ಕೆ ತಂದಿದ್ದೇನೆ. ಆದರೆ, ಅರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಗಂಗಾಧರ್ ಅವರು ನನಗೆ ಕಳಿಸಿರುವ ಮೆಸೇಜ್‌ಗಳ ದಾಖಲೆಗಳನ್ನು ಡೀನ್ ಅವರಿಗೆ ಒದಗಿಸಿದ್ದೇನೆ. ಆದರೂ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆರು ತಿಂಗಳು ಕಾಲೇಜಿಗೆ ಬಾರದಂತೆ ನನಗೇ ಸೂಚಿಸಿದ್ದರು. ಈಗ, ಪರೀಕ್ಷೆಯನ್ನೂ ಬರೆಯಲು ಬಿಡುತ್ತಿಲ್ಲ. ನನ್ನ ಪತಿ ಕೂಡ ಅದೇ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದಾರೆ. ಅವರಿಗೂ ಕಿರುಕುಳ ನೀಡಲಾಗುತ್ತಿದೆ” ಎಂದು ದೂರಿದ್ದಾರೆ.

“ನಮಗೆ ನ್ಯಾಯ ಬೇಕು. ನನ್ನ ಅಳಲಿಗೆ ಹಲವು ಸಂಘಟನೆಗಳು ಸ್ಪಂದಿಸಿದ್ದು, ಬೆಂಬಲವಾಗಿ ನಿಂತಿದ್ದಾರೆ. ಆದ್ದರಿಂದ, ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯ ಆರೋಪ ಸುದ್ದಿಯಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ, ಎಚ್ಚೆತ್ತುಕೊಂಡಿರುವ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಹರೀಶ್ ಅವರು ಪ್ರೊ. ಗಂಗಾಧರ್​​ಗೆ ನೋಟಿಸ್‌ ನೀಡಿದ್ದಾರೆ. ಅವರ ವಿರುದ್ಧದ ಆರೋಪಗಳಿಗ ಕಾರಣ ನೀಡುವಂತೆ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...