ಮೂಡಿಗೆರೆ ಸರ್ವೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಗುರುವಾರ ನಡೆದಿದೆ.
ಶಿವಕುಮಾರ್ ಅವರು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್, ಮೂಡಿಗೆರೆ ಪಟ್ಟಣದ KSRTC ಬಸ್ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹಲವು ವರ್ಷಗಳಿಂದ ಬಳಸುತ್ತಿದ್ದ ಸಿಮ್ ಬದಲಾವಣೆ ಮಾಡಿದ್ದ ಶಿವಕುಮಾರ್, ಬುಧವಾರವಷ್ಟೇ ಹೊಸ ಸಿಮ್ ಖರೀದಿಸಿದರು ಎಂದು ಮಾಹಿತಿ ತಿಳಿದು ಬಂದಿದೆ.
ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ಸರ್ವೇ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಆತ್ಮಹತ್ಯೆ ಕುರಿತು ತನಿಖೆ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.

