ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ರೈತರ ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ಜಿಲ್ಲೆಯ ಆಲ್ದೂರು ಅರಣ್ಯ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ರೈತರು ಆತಂಕಗೊಂಡಿದ್ದಾರೆ.
ಆರೇಳು ಕಾಡಾನೆಗಳು ಆಲ್ದೂರು ಅರಣ್ಯ ಪ್ರದೇಶದಲ್ಲಿ ಸುತ್ತಾಡುತ್ತಿವೆ. ಭಾನುವಾರ ಕಣತಿ ಗ್ರಾಮದಲ್ಲಿ ಕಾಣಿಸಿಕೊಂಡಿವೆ.
ಅರೇನೂರು, ಕಣತಿ, ಬೆಟ್ಟದಮರಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ತೋಟಗಳಿಗೆ ನುಗ್ಗುತ್ತಿರುವ ಆನೆಗಳು ಭತ್ತ, ಕಾಫಿ ಸೇರಿದಂತೆ ನಾನಾ ಬೆಳೆಗಳಿಗೆ ಹಾನಿ ಮಾಡಿವೆ.
ಕಾಡಾನೆಗಳ ದಾಳಿಯಿಂದ ಬೆಳೆ ಹಾನಿಯಾಗಿದ್ದು, ರೈತರು ನಷ್ಟದ ಆತಂಕ ಎದುರಿಸುತ್ತಿದ್ದಾರೆ. ಆನೆಗಳ ಹಿಂಡನ್ನು ಕಾಡಿಗೆ ಓಡಿಸುವಂತೆ ಒತ್ತಾಯಿಸಿದ್ದಾರೆ.