ಚಿಕ್ಕಮಗಳೂರು | ಹೋರಾಟದ ದನಿ ‘ಗದ್ದರ್’ಗೆ ನುಡಿನಮನ

Date:

ಕ್ರಾಂತಿಕಾರಿ ಕವಿ, ಹೋರಾಟಗಾರ ಗದ್ದರ್ ಅವರ ಜೀವನ ಇಂದಿನ ಯುವಜನತೆಗೆ ಮಾದರಿಯಾಗಿದೆ. ಕಾಫಿನಾಡಿನ ಯುವಜನರಲ್ಲೂ ಹೋರಾಟದ ಕಿಚ್ಚು ಹಚ್ಚಿಸುವಲ್ಲಿ ಅವರು ಸಫಲರಾಗಿದ್ದರು. ಅವರ ಅಗಲಿಕೆಯಿಂದ ಜನಪರ ಹೋರಾಟಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ರಾಜ್ಯ ಸಂಚಾಲಕ ಗೌಸ್‌ ಮೊಹಿದ್ದೀನ್ ಹೇಳಿದ್ದಾರೆ.

- Advertisement -

ಚಿಕ್ಕಮಗಳೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ ಗದ್ದರ್‌ ನುಡಿನಮನ ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು. “ದೇಶದ ಬಡಜನರು, ಕಾರ್ಮಿಕರು, ಮಹಿಳೆಯರು, ಆದಿವಾಸಿಗಳ ಹಕ್ಕುಗಳಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದ ಕ್ರಾಂತಿಕಾರಿ ಗದ್ದರ್ ಅವರ ನಿಧನದಿಂದಾಗಿ ಜನಪರ ಹೋರಾಟಗಳಿಗೆ ತುಂಬಲಾರದ ನಷ್ಟ ಉಂಟಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“80ರ ದಶಕದಲ್ಲಿ ಕ್ರಾಂತಿಕಾರಿ ಚಳವಳಿಗಳಲ್ಲಿ ಭಾಗವಹಿಸಿ ಜನನಾಟ್ಯ ಮಂಡಳಿ ಮೂಲಕ ಆಂಧ್ರ, ತೆಲಂಗಾಣ, ಛತ್ತೀಸ್‌ ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ ಕರ್ನಾಟಕ, ಒಡಿಶಾ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಜನಪರ ಹೋರಾಟಗಳನ್ನು ಗದ್ದರ್ ಕಟ್ಟಿದ್ದರು. ಬಡವರ ನೋವು, ಸಂಕಟ, ಸಮಸ್ಯೆ, ಆಡಳಿತ ಶಾಹಿ ವ್ಯವಸ್ಥೆಯನ್ನು ಕ್ರಾಂತಿಕಾರಿ ಹಾಡುಗಳ ಮೂಲಕ ವಿವರಿಸುತ್ತಿದ್ದರು. ಯುವಜನರಲ್ಲಿ ಹೋರಾಟದ ಕಿಚ್ಚು ಮೂಡಿಸುವಲ್ಲಿ ಯಶಸ್ವಿಯಾಗಿದ್ದರು” ಎಂದು ಸ್ಮರಿಸಿದರು.

“ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಘಪರಿವಾರದ ಷಡ್ಯಂತ್ರಗಳ ವಿರುದ್ಧ ಕೋಮುಸೌಹಾರ್ದ ವೇದಿಕೆ ಹೋರಾಟ ರೂಪಿಸಿದ್ದ ಸಂದರ್ಭದಲ್ಲಿ ಕವಿ ಗದ್ದರ್ ಅವರನ್ನು ಆಹ್ವಾನಿಸಲಾಗಿತ್ತು. ಆ ಹೋರಾಟದಲ್ಲಿ ಭಾಗವಹಿಸಿದ್ದ ಅವರು ಕಾಫಿನಾಡಿನ ಜನರಲ್ಲಿ ಸಂಚಲನ ಮೂಡಿಸಿದ್ದರು. ಜಿಲ್ಲೆಯ ಯುವಜನರು ಅವರ ಕ್ರಾಂತಿಗೀತೆಗಳು, ಮಾತುಗಳಿಂದ ಪ್ರೇರಿತರಾಗಿ ಜನಪರ ಹೋರಾಟಗಳಿಗೆ ಧುಮುಕಿದ್ದರು. ಜಿಲ್ಲೆಯ ಚಳವಳಿಗೆ ಗದ್ದ‌ರ್ ಅವರು ನೀಡಿರುವ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ” ಎಂದರು.

“ಕೋಮುವಾದ, ಅಧಿಕಾರಶಾಹಿ, ಬಂಡವಾಳಶಾಹಿ ವ್ಯವಸ್ಥೆಯಿಂದಾಗಿ ಬಡವರು, ಕಾರ್ಮಿಕರು, ಆದಿವಾಸಿಗಳು, ಮಹಿಳೆಯರ ಬದುಕು ಬೀದಿಪಾಲಾಗುತ್ತಿದೆ. ಅರಣ್ಯವಾಸಿಗಳ ಬದುಕು ಅತಂತ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕವಿ ಗದ್ದರ್ ಅವರ ಚಿಂತನೆಗಳ ಪಾಲನೆಯಿಂದ ಭ್ರಷ್ಟ ವ್ಯವಸ್ಥೆ ವಿರುದ್ಧ ಹೋರಾಡಲು ಸಾಧ್ಯವಿದೆ. ಗದ್ದರ್ ಅವರ ಜೀವನ ಇಂದಿನ ಯುವಜನತೆಗೆ ಮಾದರಿಯಾಗಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಮರ್ಲೆ ಅಣ್ಣಯ್ಯ, ಹುಣಸೇಮಕ್ಕಿ ಲಕ್ಷಣ್ ವೆಂಕಟೇಶ್ ಶೋಯಬ್, ಗೋಪಾಲಗೌಡ, ಹೊನಪ್ಪ ಗೌಡ, ಮಂಜು, ಹಸನಬ್ಬ ಅರುಣಾಕ್ಷಿ ,ವೆಂಕಟೇಶ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...