ಚಿಕ್ಕಮಗಳೂರು | ಪೊಲೀಸ್‌ ಠಾಣೆಯಲ್ಲೇ ಧರಣಿ ಕುಳಿತ ಮಹಿಳೆ

Date:

ತಮಗೆ ಬೆದರಿಕೆ ಹಾಕಿದವರ ವಿರುದ್ಧ ದೂರು ನೀಡಲು ಬಂದರೆ, ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ. ದೂರು ದಾಖಲಾಗುವವರೆಗೂ ಕದಲುವುದಿಲ್ಲವೆಂದು ಮಹಿಳೆಯೊಬ್ಬರು ತನ್ನ ಮಗುವೊಂದಿಗೆ ರಾತ್ರಿ 1 ಗಂಟೆವರೆಗೂ ಕಳಸ ಪೊಲೀಸ್‌ ಠಾಣೆಯಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದ ಮಹಿಳೆ ಧರಣಿ ನಡೆಸಿದ್ದಾರೆ. ತನಗೂ, ತನ್ನ ಪತಿಗೂ ಇಬ್ಬರು ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ದೂರು ನೀಡಲು ಹೋದರೆ, ಕುದುರೆಮುಖ ಪೊಲೀಸ್‌ ಠಾಣೆಯ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ತಮ್ಮ ಪಕ್ಕದ ಮನೆಯ ಯುವಕರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆ ವಿಡಿಯೋ ಕೂಡ ಇದೆ. ವಿಡಿಯೋವನ್ನು ನೀಡಿದರೂ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಫ್‌ಐಆರ್ ದಾಖಲಾಗುವವರೆಗೂ ಠಾಣೆಯಿಂದ ಕದಲುವುದಿಲ್ಲವೆಂದು ತನ್ನ ಮಗುವಿನೊಂದಿಗೆ ಮಹಿಳೆ ಧರಣಿ ಕುಳಿತಿದ್ದಾರೆ. ಆಕೆಯ ಆಕ್ರೋಶಕ್ಕೆ ಮಣಿದ ಪೊಲೀಸರು ಆರೋಪಿ ಯುವಕರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಆರೋಪಿ ನವೀನ್, ಶ್ರೇಯಾಂಶ್ ವಿರುದ್ಧ ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪಾವಳಿ; ಯಶವಂತಪುರ-ಮಡಗಾಂವ್-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು...

ವಿಜಯಪುರ | ಕಸ ವಿಲೇವಾರಿ ಘಟಕವನ್ನು ಹಸಿರು ಪರಿಸರದ ಮಾದರಿಯಾಗಿಸಿ: ಜಿಲ್ಲಾಧಿಕಾರಿ ಆನಂದ ಕೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಇವಣಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ...

ವಿಜಯಪುರ | ಅಭಿವೃದ್ಧಿ ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ: ಜಿಲ್ಲಾಧಿಕಾರಿ ಡಾ. ಆನಂದ ಕೆ

ವಿಜಯಪುರ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ಪಟ್ಟಣಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ...

ಗದಗ | ಶೌಚಾಲಯ ಕಟ್ಟಿದರೆ ಸಾಲದು, ಬಳಸಿದರೆ ಸಾಧನೆ: ಸಭಾಧ್ಯಕ್ಷ ಜಿ.ಎಸ್.ಪಾಟೀಲ

"ಹಳ್ಳಿಗಳಲ್ಲಿ ಶೌಚಾಲಯಗಳನ್ನು ಕಟ್ಟಿದ್ದೇವೆ, ಕಾಗದದ ಮೇಲೆ 'ಬಯಲು ಶೌಚಮುಕ್ತ ದೇಶ'ವೆಂದು ಘೋಷಿಸಿಕೊಂಡಿದ್ದೇವೆ....