“ನಶಾಮುಕ್ತ ಬೀರೂರು ನಿರ್ಮಾಣ ಮಾಡುವ ಉದ್ದೇಶದಿಂದ ಗಾಂಜಾ ಮಾರಾಟ ಹಾಗೂ ಸೇವನೆಯಿಂದ ಸಮಾಜದ ಭವಿಷ್ಯ ಹಾಳಗುತ್ತಿದೆ. ಯುವಕರು ಬಲಿಯಾಗುತ್ತಿದ್ದಾರೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಜಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯಲ್ಲಿ ವ್ಯಾಪಕವಾಗಿ ಗಾಂಜಾ ಸೇವನೆ ಮತ್ತು ಮಾರಾಟ ತಡೆಗಟ್ಟುವಂತೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಯ ಕಾರ್ಯಕರ್ತರು ಬೀರೂರು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಗಣತಿದಾರರು ‘ಹಳ್ಳಿಕಾರ’ ಎಂದು ನಮೂದಿಸಿ: ಕೋಟೆ ಸೋಮಣ್ಣ ಮನವಿ
“ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಜೊತೆಗೆ ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಕಾರ್ಯಕರ್ತರು ಆಗ್ರಹಿಸಿದರು. “ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಕೂಡ ಅಧಿಕಾರಿಗಳಿಗೆ ವಿನಂತಿಸಲಾಯಿತು.