ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

Date:

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಕಡೂರು ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದೆ. 

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿ, ₹30 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರಿನ ಇರ್ಫಾನ್, ನುಮಾನ್, ಶಾಹಿದ್, ಬೀರೂರಿನ ಸಲ್ಮಾನ್ ಶರೀಫ್ ಹಾಗೂ ಕಡೂರಿನ ನದೀಮುಲ್ಲಾ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ನವೆಂಬರ್ 7ರ ಮಧ್ಯರಾತ್ರಿ ಬೀರೂರು ಮೂಲದ ಅಡಿಕೆ ವ್ಯಾಪಾರಿ ತೌಫಿಕ್ ಅವರು ಫಾರ್ಚೂನರ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ₹58 ಲಕ್ಷ ಹಣ ದೋಚಿ ಪರಾರಿಯಾಗಿದ್ದರು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಭದ್ರಾವತಿಯಲ್ಲಿ ಅಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ತೌಫಿಕ್ ಅವರ ಬಳಿ ಕೆಲಸ ಮಾಡುತ್ತಿದ್ದ ಇರ್ಫಾನ್ ಕೆಲಸ ಬಿಟ್ಟ ಬಳಿಕ ದರೋಡೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ತೌಫಿಕ್ ಅವರು ಒಬ್ಬರೇ ಹಣದೊಂದಿಗೆ ಪ್ರಯಾಣಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ತನ್ನ ಸಹಚರರೊಂದಿಗೆ ಸೇರಿ ದರೋಡೆ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ದಯಾಮ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಹಾಗೂ ಡಿವೈಎಸ್ಪಿ ಪರಶುರಾಮಪ್ಪ ಅವರ ಮಾರ್ಗದರ್ಶನದಲ್ಲಿ ಕಡೂರು ಸರ್ಕಲ್ ಇನ್‌ಸ್ಪೆಕ್ಟರ್ ಮಧು, ಪಿಎಸ್‌ಐಗಳಾದ ಜಿ.ಆರ್. ಸಜಿತ್ ಕುಮಾರ್, ಧನಂಜಯ್ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಮಾನ್ಯಾ ಹತ್ಯೆ ಪ್ರಕರಣ: ತ್ವರಿತ ನ್ಯಾಯಕ್ಕೆ ಚೇತನ್ ಅಹಿಂಸಾ ಆಗ್ರಹ

ಅಂತರ್ಜಾತಿ ವಿವಾಹದ ಕಾರಣಕ್ಕೆ ನಡೆದ ಮಾನ್ಯಾ ಪಾಟೀಲ್ ಅವರ ಮರ್ಯಾದೆಗೇಡು ಹತ್ಯೆ...

ಕಾರವಾರ | ಮುಗ್ಧ ಮಗುವಿನ ಮೇಲೆ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ

ಕಾರವಾರ: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ...

ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ...

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...