ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರ್ ಕೆರೆಗೆ ಬಿದ್ದ ಪರಿಣಾಮ ಮೂವರು ಪಾರಾದ ಘಟನೆ ಚಿಕ್ಕಮಗಳೂರು ನಗರದ ಕೋಟೆಕೆರೆಯಲ್ಲಿ ಘಟನೆ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ರಸ್ತೆಗೆ ಬಿದ್ದಿದ್ದು, ನಿಯಂತ್ರಣ ಕಳೆದುಕೊಂಡ ಕಾರು ಕೆರೆಯ ರಕ್ಷಣೆಗೆ ಹಾಕಲಾಗಿದ್ದ ಬಲಿಷ್ಠ ಕಬ್ಬಿಣದ ಬೇಲಿಯನ್ನು ಮುರಿದುಕೊಂಡು ನೇರವಾಗಿ ಕೆರೆಯೊಳಗೆ ಮುಳುಗಿದೆ. ಈ ಘಟನೆ ನಡೆದ ತಕ್ಷಣ ಸ್ಥಳೀಯರು ಕಾರ್ಯಾಚರಣೆ ನಡೆಸಿ, ಕಾರಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ
ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಪೊಲೀಸರು ಕ್ರಮ ಕೈಗೊಂಡಿದ್ದಾರೆ.




