ಚಿಕ್ಕಮಗಳೂರು | ಕಾಡಾನೆ ದಾಳಿ ಮತ್ತೊಂದು ಸಾವು: ಕಾಡಾನೆ ಸ್ಥಳಾಂತರಿಸಿದರೆ ತೀವ್ರ ಹೋರಾಟ; SDPI ಎಚ್ಚರಿಕೆ

Date:

ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷ್ಣಮೂರ್ತಿ ಎಂಬವರು ಮೃತಪಟ್ಟಿರುವ ಘಟನೆ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮುಸ್ತಫ ಆಲ್ದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ದನ ಹುಡುಕಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳ ಹಿಂದಷ್ಟೇ ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲೂ ಮತ್ತೊಂದು ಜೀವ ಬಲಿಯಾಗಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

​ಜಿಲ್ಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯಿಂದ ರೈತರು, ಕೃಷಿ ಕಾರ್ಮಿಕರು ಹಾಗೂ ಕಾಡಂಚಿನ ಗ್ರಾಮಗಳ ಜನರು ಪ್ರತಿನಿತ್ಯ ತಮ್ಮ ಕೃಷಿ ಚಟುವಟಿಕೆಗಳಿಗೆ ತೋಟಗಳಿಗೆ ತೆರಳಲು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೊಂದು ಸಾವು-ನೋವುಗಳು ಸಂಭವಿಸುತ್ತಿದ್ದರೂ ಸರ್ಕಾರ ಮತ್ತು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿವೆ.

​ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಆನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಓಡಿಸುವ ಅಥವಾ ಸ್ಥಳಾಂತರಿಸುವ ಯಾವುದೇ ಪ್ರಯತ್ನ ನಡೆದರೆ ಅದನ್ನು SDPI ತೀವ್ರವಾಗಿ ವಿರೋಧಿಸಲಿದೆ. ಒಂದು ಜಿಲ್ಲೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಹೆಸರಿನಲ್ಲಿ ಮತ್ತೊಂದು ಜಿಲ್ಲೆಯ ಜನರನ್ನು ಅಪಾಯಕ್ಕೆ ತಳ್ಳುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ. ಹಾಸನದ ಜನರ ಜೀವವೂ ಅಮೂಲ್ಯ, ಚಿಕ್ಕಮಗಳೂರಿನ ಜನರ ಜೀವವೂ ಅಷ್ಟೇ ಅಮೂಲ್ಯವಾಗಿದ್ದು, ಜನರ ಸುರಕ್ಷತೆಯನ್ನು ರಾಜಕೀಯ ಮತ್ತು ಆಡಳಿತಾತ್ಮಕ ಪ್ರಯೋಗಗಳಿಗೆ ಬಲಿ ಕೊಡಬಾರದು. ಒಂದೊಮ್ಮೆ ಹಾಸನದಿಂದ ಚಿಕ್ಕಮಗಳೂರಿಗೆ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಯತ್ನಕ್ಕೆ ಮುಂದಾದರೆ ಜಿಲ್ಲೆಯ ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಕಾಡಾನೆ ದಾಳಿಗೆ ಕಾರ್ಮಿಕ ಸಾವು 

​ಕೂಡಲೇ ರಾಜ್ಯ ಸರ್ಕಾರ ಕಾಡಾನೆ ಸಮಸ್ಯೆಗೆ ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರ ರೂಪಿಸಿ, ಕಾಡಂಚಿನ ಗ್ರಾಮಗಳಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು. ಮೃತ ಕೃಷ್ಣಮೂರ್ತಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಜನರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆಯಾಗಬೇಕಿದ್ದು, ಚಿಕ್ಕಮಗಳೂರು ಜಿಲ್ಲೆಯ ಜನರ ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಸ್ತಫ ಆಲ್ದೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ: ಡಾ. ಯತೀಂದ್ರ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ...

ಬೆಳಗಾವಿ |ನಂದಿನಿ ಹಾಲು ಉತ್ಪಾದಕರಿಗೆ ₹2.40 ಕೋಟಿ ಮೌಲ್ಯದ ಉಪಕರಣ ವಿತರಣೆ

ನಂದಿನಿ ಹಾಲಿನ ಗುಣಮಟ್ಟ ಮತ್ತು ಒಕ್ಕೂಟದ ಮೇಲಿನ ರೈತರ ವಿಶ್ವಾಸದಿಂದಾಗಿ ಬೆಳಗಾವಿ...

ಗದಗ | ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಸ್ಎಫ್ಐ ಸಹಿ ಸಂಗ್ರಹ ಆಂದೋಲನ; ರಾಜ್ಯಾಧ್ಯಕ್ಷ ಗಣೇಶ್ ರಾಠೋಡ್ ಚಾಲನೆ

ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಸ್ಎಫ್ಐ ಸಹಿ ಸಂಗ್ರಹ ಆಂದೋಲನಕ್ಕೆ ರಾಜ್ಯಧ್ಯಕ್ಷ ಗಣೇಶ...

ಗದಗ | ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಮಹಾತ್ಮ...