ಚಿಕ್ಕಮಗಳೂರು | ಎಸ್ಟೇಟ್‌ನಲ್ಲಿ ಕಾರ್ಮಿಕರಿಗೆ ದೌರ್ಜನ್ಯ: ಸಿಪಿಐ (ಎಂಎಲ್) ರೆಡ್ ಸ್ಟಾರ್ ತೀವ್ರ ಖಂಡನೆ

Date:

ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಪಕ್ಷದ ಜಿಲ್ಲಾ ಸಮಿತಿ ನಿಯೋಗ – ಮಾಲೀಕನನ್ನು ತಕ್ಷಣ ಬಂಧಿಸಲು ಆಗ್ರಹಿಸಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಕಟ್ರುಮನೆ ಬ್ರಹ್ಮಗಿರಿ ಎಸ್ಟೇಟ್‌ನಲ್ಲಿ ಕೂಲಿ ಹೆಚ್ಚಳ ಕೇಳಿದ ಕಾರಣಕ್ಕೆ ಎಸ್ಟೇಟ್ ಮಾಲೀಕನು ಮಹಿಳೆಯರು ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ದೌರ್ಜನ್ಯವನ್ನು ಸಿಪಿಐ (ಎಂಎಲ್) ರೆಡ್ ಸ್ಟಾರ್ ಚಿಕ್ಕಮಗಳೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಗಾಯಗೊಂಡ ಕಾರ್ಮಿಕರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಸಮಿತಿ ವತಿಯಿಂದ ಕಾಂ. ಸಂದೀಪ್ ಬಿ.ಆರ್, ಕಾಂ. ಬಸವರಾಜ್, ಕಾಂ. ಶಂಕರ್, ಕಾಂ. ಗೋಪಾಲ್ ಅವರನ್ನೊಳಗೊಂಡ ನಿಯೋಗವು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ಕಾರ್ಮಿಕರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಳ್ಳಲಾಯಿತು.

ತಮ್ಮ ರಕ್ತ ಬೆವರಿನ ದುಡಿಮೆಯಿಂದ ಎಸ್ಟೇಟ್ ಕಟ್ಟಿದ ಕಾರ್ಮಿಕರು ನ್ಯಾಯಯುತ ಕೂಲಿ ಕೇಳುವುದು ಅಪರಾಧವೇ? ಕೂಲಿ ಕೇಳಿದರೆ ಹೊಡೆದು, ಬೆದರಿಸಿ, ಮಹಿಳೆಯರ ಮೇಲೂ ದೌರ್ಜನ್ಯ ನಡೆಸುವುದು ಎಂದರೆ ಇದು ಇನ್ನೂ ಜಮೀನ್ದಾರಿ ಗುಲಾಮಗಿರಿ ಪದ್ಧತಿಯೇ ಮುಂದುವರಿದಿದೆ ಎಂಬುದಕ್ಕೆ ಸಾಕ್ಷಿ. ಮಾಲೀಕರ ಈ ದರ್ಪವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಮಿತಿಯ ಸಂದೀಪ್ ತಿಳಿಸಿದರು.

ಜಿಲ್ಲೆಯ ಬಹುತೇಕ ಎಸ್ಟೇಟ್‌ಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ, ಸೌಲಭ್ಯಗಳು ಸಿಗುತ್ತಿಲ್ಲ. ಕಾರ್ಮಿಕ ಕಾನೂನುಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ. ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಮೌನವಾಗಿರುವುದೇ ಮಾಲೀಕರ ದೌರ್ಜನ್ಯಕ್ಕೆ ಪ್ರೋತ್ಸಾಹ ನೀಡುತ್ತಿದೆ.

ಜಿಲ್ಲಾ ಸಮಿತಿಯ ಆಗ್ರಹಗಳು:

1. ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಬ್ರಹ್ಮಗಿರಿ ಎಸ್ಟೇಟ್ ಮಾಲೀಕ ಮತ್ತು ಸಹಚರರನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

2. ಗಾಯಗೊಂಡ ಎಲ್ಲಾ ಕಾರ್ಮಿಕರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಮತ್ತು ಸೂಕ್ತ ಪರಿಹಾರ ನೀಡಬೇಕು.

3. ಕಾರ್ಮಿಕರ ಕೂಲಿ ಹೆಚ್ಚಳದ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು. ಕೂಲಿ ಕೇಳಿದ ಕಾರಣಕ್ಕೆ ಯಾವುದೇ ಕಾರ್ಮಿಕನನ್ನು ಕೆಲಸದಿಂದ ತೆಗೆಯುವ, ಬೆದರಿಸುವ ಕೆಲಸ ಮಾಡಬಾರದು.

4. ಜಿಲ್ಲೆಯ ಎಲ್ಲಾ ಎಸ್ಟೇಟ್‌ಗಳಲ್ಲಿ ಕಾರ್ಮಿಕ ಕಾನೂನು ಉಲ್ಲಂಘನೆಯ ಬಗ್ಗೆ ಕಾರ್ಮಿಕ ಇಲಾಖೆಯು ತಕ್ಷಣ ತನಿಖೆ ನಡೆಸಬೇಕು.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು | ಬಂದೂಕು ಹಿಡಿದು ಕಾರ್ಮಿಕರಿಗೆ ಜೀವ ಬೆದರಿಕೆ:ಆರೋಪಿಗಳನ್ನು ಗಡಿಪಾರು ಮಾಡಿ; ಕೆ.ಎಲ್ ಅಶೋಕ್ 

ಕೂಡಲೇ ಕ್ರಮ ಕೈಗೊಳ್ಳದಿದ್ದರೆ, ಗಾಯಗೊಂಡ ಕಾರ್ಮಿಕರೊಂದಿಗೆ, ಜಿಲ್ಲೆಯ ಕಾರ್ಮಿಕರೊಂದಿಗೆ ಸೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಸಮಿತಿ ಎಚ್ಚರಿಸುತ್ತದೆ. ಗಾಯಗೊಂಡ ಕಾರ್ಮಿಕರಿಗೆ ಪಕ್ಷವು ಸಂಪೂರ್ಣವಾಗಿ ಬೆಂಬಲವಾಗಿ ನಿಲ್ಲುತ್ತದೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯುತ್ತದೆ ಮಾಲೀಕನನ್ನು ತಕ್ಷಣ ಬಂಧಿಸಿ! ಕಾರ್ಮಿಕರಿಗೆ ನ್ಯಾಯ ಕೊಡಿ ಎಂದು ಅಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಲ್ಲಾಧಿಕಾರಿಯಿಂದ ಅಗೌರವ ಆರೋಪ : ಸಭೆಯಲ್ಲಿ ನೆಲದ ಮೇಲೆ ಕುಳಿತ ಭೀಮಶಕ್ತಿ ಸಂಘಟನೆ ಸದಸ್ಯರು

ಭೀಮಶಕ್ತಿ ಸಂಘಟನೆ ಪದಾಧಿಕರಿಗಳಿಗೆ ಜಿಲ್ಲಾಧಿಕಾರಿಯಿಂದ ಅಗೌರವ ತೋರಿಸಲಾಗಿದೆ ಎಂದು ವಿರೋಧಿಸಿ...

12 ದಿನಗಳಿಂದ ಆಶಾ ಹೋರಾಟ; ಸರ್ಕಾರದ ನಿರ್ಲಕ್ಷ್ಯಕ್ಕೆ ಖಂಡನೆ: ಮೈಸೂರಿನಲ್ಲಿ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಹಾಗೂ ಕನಿಷ್ಠ ಮಾಸಿಕ...

ಗದಗ | ಪಿಯು ಶಿಕ್ಷಣ ವ್ಯವಸ್ಥೆ ಸುಧಾರಿಸಬೇಕಿದೆ: ಶಾಸಕ ಎಸ್. ವಿ. ಸಂಕನೂರ

ಪಿಯು ಕಾಲೇಜಿನ ಫಲಿತಾಂಶದಲ್ಲಿ ಜಿಲ್ಲೆ ಕಳಪೆ ಗುಣಮಟ್ಟ ಸಾಧಿಸಿದೆ. ಕಳೆದ ಸಭೆಯಲ್ಲಿ...

ಗದಗ | ಡಿಸೆಂಬರ್‌ನಲ್ಲಿ ರೈತರ ಖಾತೆಗೆ 5000 ರೂ: ಸಚಿವ ಬಸವರಾಜ ರಾಯರೆಡ್ಡಿ

"ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಬರ ಪರಿಹಾರವಾಗಿ ಪ್ರತಿ ರೈತರ...