ಚಿಕ್ಕಮಗಳೂರು | ರೇಬೀಸ್ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ ಡಾ.ಗುರುಶಾಂತಪ್ಪ 

Date:

ರೇಬೀಸ್ ಖಾಯಿಲೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಕಾಣಸಿಗುವಂತಹದ್ದು. ಜಗತ್ತಿನಲ್ಲಿ ಸುಮಾರು 60,000 ಜನ ಇದರಿಂದ ಬಳಲುತ್ತಿದ್ದು, ಭಾರತದಲ್ಲಿ 20,000 ಪ್ರಕರಣಗಳು ಕಂಡುಬರುತ್ತವೆ ಮತ್ತು ಅದರಲ್ಲಿನ ಶೇ.40ರಷ್ಟು ಮಕ್ಕಳನ್ನೊಳಗೊಂಡ ಪ್ರಕರಣಗಳಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ರೇಬೀಸ್ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಚಿಕ್ಕಮಗಳೂರಿನ ಉಪನಿರ್ದೇಶಕ ಡಾ. ಗುರುಶಾಂತಪ್ಪ ತಿಳಿಸಿದರು.

- Advertisement -

ಕಳಸ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ -1 ಮತ್ತು ಘಟಕ -2 ಹಾಗೂ ಐ ಕ್ಯೂ ಎಸ್ ಸಿ ಸಹಯೋಗದಲ್ಲಿ ಶುಕ್ರವಾರ ಕಾಲೇಜು ಸಭಾಂಗಣದಲ್ಲಿ  ಹಮ್ಮಿಕೊಂಡಿದ್ದ ರೇಬೀಸ್ ರೋಗದ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿದ ಅವರು, ರೇಬೀಸ್ ಎಂಬುವಂತಹದ್ದು ಲೈಸಾ ವೈರಾಣುವಿನಿಂದ ಬರುವ ರೋಗವಾಗಿದ್ದು, ನಾಯಿ,ಬೆಕ್ಕು, ಮುಂಗುಸಿ, ಬಾವಲಿ ಸೇರಿದಂತೆ ಪ್ರಾಣಿಗಳಿಂದ ಹರಡುವ ರೋಗ. ಪ್ರಾಣಿಗಳು ಕಚ್ಚಿದ ಸ್ಥಳದಿಂದ ದೇಹದ ವಿವಿಧ ಭಾಗಗಳ ಮೂಲಕ ವೈರಸ್ ಸಂಚರಿಸಿ ಮೆದುಳನ್ನು ತಲುಪುತ್ತದೆ. ಈ ಖಾಯಿಲೆಯ ನಿಯಂತ್ರಣಕ್ಕೆ ವಿಶ್ವಸಂಸ್ಥೆ ಸಹಯೋಗದಲ್ಲಿ ಒನ್ ಹೆಲ್ತ್ ಅಭಿಯಾನ ಆರಂಭಿಸಿದ್ದು, 2030ರವರೆಗೆ ಭಾರತವನ್ನು ರೇಬೀಸ್ ಮುಕ್ತಗೊಳಿಸುವ ಗುರಿ ಹೊಂದಿದೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ, ಮೈಸೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ, ಜಂಟಿ ನಿರ್ದೇಶಕ ಡಾ.ಶ್ರೀಧರ್ ಮೂರ್ತಿ ಮಾತನಾಡಿ, ನಮ್ಮ ನೆರೆಯ ಭೂತಾನ್ ದೇಶವು ಇತ್ತೀಚೆಗೆ ರೇಬೀಸ್ ಮುಕ್ತ ರಾಷ್ಟ್ರವಾಗಿದ್ದು, ಭಾರತವನ್ನು ಕೂಡ ರೇಬೀಸ್ ಮುಕ್ತ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾಕು ಪ್ರಾಣಿಗಳಿಗೆ ಉಚಿತ ಲಸಿಕೆ ಅಭಿಯಾನ ಆರಂಭಿಸಲಾಗಿದೆ ಎಂದರು. 

ಕಾಲೇಜಿನ ಪ್ರಾಂಶುಪಾಲರಾದ ವಿಶುಕುಮಾರ್. ಎನ್ ಮಾತನಾಡಿ, ಪ್ರಾಣಿಗಳನ್ನು ಸಾಕುವುದು ತಪ್ಪಲ್ಲ, ಆದರೆ ಆ ಪ್ರಾಣಿಗಳಿಂದಾಗಬಲ್ಲ ಹಾನಿಯ ಬಗ್ಗೆ ಮುಂಜಾಗ್ರತೆ ವಹಿಸುವುದು ಸೂಕ್ತ. ಆದ್ದರಿಂದ ವಿದ್ಯಾರ್ಥಿಗಳು ಆದಷ್ಟು ಪ್ರಾಣಿಗಳ ಜೊತೆಗೆ ಜಾಗರೂಕರಾಗಿರಬೇಕು ಎಂದರು.  ಈ ಕಾರ್ಯಕ್ರಮದಲ್ಲಿ ರೇಬೀಸ್ ಖಾಯಿಲೆ ಜಾಗೃತಿಗಾಗಿ ವಿಶೇಷ ಪೋಸ್ಟರ್ ಬಿಡುಗಡೆ ಮತ್ತು ರೇಬೀಸ್ ಖಾಯಿಲೆ ಕುರಿತು ಕಿರು ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಯಿತು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಾರ್ಯಕ್ರಮದಲ್ಲಿ ಮೂಡಿಗೆರೆ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ವಿನಂತ್.ಪಿ.ಎಸ್, ಪಶುವೈದ್ಯಾಧಿಕಾರಿಗಳಾದ ಡಾ. ಸಚಿನ್, ಡಾ.ಸವಿತಾ ಕೋಟಿ, ಡಾ. ಮನು, ಎನ್.ಎಸ್.ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಪುನೀತ್ ಕುಮಾರ್ ಕೆ.ಆರ್, ಉದ್ಯೋಗ ಕೋಶ ಘಟಕದ ಸಂಚಾಲಕರಾದ ಡಾ. ದಿನೇಶ್ ಟಿ.ಎಂ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...

ಉಡುಪಿ | ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ, ಉಡುಪಿ ಇದರ 2025-26ನೇ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....