ಚಿಕ್ಕಮಗಳೂರು ನಗರದ ತಾಲೂಕು ಕಚೇರಿ ಮುಂಭಾಗ ಸಚಿವ ನಾಗೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಖಂಡಿಸಿ ಹಾಗೂ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲಾ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಮೆರವಣಿಗೆಯ ಮೂಲಕ ತೆರಳಿದ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ (DC) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಎಸ್‌ಪಿ ಕಚೇರಿ ಬಳಿ ಪೊಲೀಸರು ಕಾರ್ಯಕರ್ತರನ್ನು ತಡೆದರು. ಇದರಿಂದಾಗಿ ಸ್ಥಳದಲ್ಲಿ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಇದನ್ನೂ ಓದಿದ್ದೀರಾ?ಹಾಸನ | 80ನೇ ಸ್ವಾತಂತ್ರ್ಯವನ್ನು ಎಲ್ಲೆಡೆ ಆಚರಣೆ
ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದ ಮಹಿಳೆಯರು ಸೇರಿದಂತೆ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.




