ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

Date:

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ಬುಧವಾರ ನಡೆದಿದೆ.

- Advertisement -

ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಾಹನ ಚಲಾಯಿಸುತ್ತಿದ್ದ ಚಾಲಕ ಬೆಂಕಿಯ ಜ್ವಾಲೆಯನ್ನು ಗಮನಿಸಿದ ತಕ್ಷಣ ಸಮಯಪ್ರಜ್ಞೆ ಮೆರೆದು ವಾಹನದಿಂದ ಕೆಳಕ್ಕೆ ಹಾರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರಗೊಂಡು ವಾಹನವನ್ನು ಸಂಪೂರ್ಣವಾಗಿ ಆವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ವಾಹನದಲ್ಲಿ ಉಂಟಾದ ತೀವ್ರ ಉಷ್ಣಾಂಶದಿಂದ ಟೈರ್ ರಭಸದಿಂದ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ಸಿಬ್ಬಂದಿ ಶಿವಪ್ರಸಾದ್ ಅವರ ಕೈ, ಮುಖ ಹಾಗೂ ಎದೆಯ ಭಾಗಕ್ಕೆ ಗಾಯಗಳಾಗಿವೆ.

ಇದನ್ನೂ ಓದಿದ್ದೀರಾ?ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಗಾಯಾಳು ಶಿವಪ್ರಸಾದರನ್ನು ತರೀಕೆರೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿ ಅವಘಡದಿಂದ ಕ್ಯಾಂಟರ್ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಎದುರಾಗಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...

ಚಿಕ್ಕಮಗಳೂರು | ಪ. ಜಾತಿ, ಪ. ಪಂಗಡ:ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ 

ಜಿಲ್ಲೆಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ...

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...