ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷ ಜೀವನ್ ಆಯುಧ ಪೂಜೆಯ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜೀವನ್ ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಲು ಅವರು ಡಬಲ್ ಬ್ಯಾರೆಲ್ ಗನ್ ಮತ್ತು ರಿವಾಲ್ವರ್ ಅನ್ನು ಬಳಸಿದ್ದಾರೆ. ಈ ಸಂಪೂರ್ಣ ಘಟನೆಯ ವಿಡಿಯೋವನ್ನು ಚಿತ್ರೀಕರಿಸಲಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ವಿಡಿಯೋ ವೈರಲ್ ಆದ ನಂತರ, ಘಟನೆಯ ಗಂಭೀರತೆಯನ್ನು ಮನಗಂಡ ಪೊಲೀಸರು, ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ
ಜನವಸತಿ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸಿ ಗಾಳಿಯಲ್ಲಿ ಗುಂಡು ಹಾರಿಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇದು ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುತ್ತದೆ. ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.





