ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

Date:

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ ಹೊಣೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ್ ಶೆಟ್ಟಿ ಹೇಳಿದರು.

- Advertisement -

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ ಹಾಗೂ ಬಾಲ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ- 2016ರ ಅಡಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಆಯೋಜಿಸಲಾಗಿದ್ದ ’ಕಾನೂನು ಅರಿವು ಹಾಗೂ ತರಬೇತಿ ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಕಾನೂನಿನ ಅರಿವು ಕೇವಲ ಅನಕ್ಷರಸ್ಥರಿಗೆ ಮಾತ್ರವಲ್ಲ, ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್‌ಗಳು ಹಾಗೂ ವಿಜ್ಞಾನಿಗಳಿಗೂ ಅಗತ್ಯವಾಗಿದೆ. ಪ್ರತಿಯೊಬ್ಬರಿಗೂ ಕಾನೂನಿನ ಎಲ್ಲಾ ಸೂಕ್ಷ್ಮತೆಗಳು ತಿಳಿದಿರುವುದಿಲ್ಲ. ಸಮಾಜದ ದುರ್ಬಲ, ಅಸಹಾಯಕ ಹಾಗೂ ಶೋಷಿತ ವರ್ಗದ ಜನರಿಗೆ ಉಚಿತ ಮತ್ತು ಸಕ್ಷಮ ಕಾನೂನು ನೆರವು ನೀಡುವುದು ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ. ಜನನ-ಮರಣ ನೋಂದಣಿ ಕಾಯ್ದೆಯ ಉದಾಹರಣೆ ನೀಡಿ, ಪ್ರತಿಯೊಂದು ಜನನ ಮತ್ತು ಮರಣವನ್ನು ಸ್ಥಳೀಯ ಪಂಚಾಯಿತಿ ಅಥವಾ ಪುರಸಭೆಯಲ್ಲಿ ನೋಂದಾಯಿಸಬೇಕು ಎಂಬ ಸರಳ ನಿಯಮವೂ ಹಲವರಿಗೆ ತಿಳಿದಿಲ್ಲ. ಪರಿಣಾಮವಾಗಿ, ರಾಜ್ಯದಲ್ಲಿ ಪ್ರತಿ ಲೋಕ್ ಅದಾಲತ್‌ನಲ್ಲಿ 35,೦೦೦ ದಿಂದ 4೦,೦೦೦ ಜನನ-ಮರಣ ಪ್ರಮಾಣಪತ್ರಗಳನ್ನು ವಿತರಿಸಬೇಕಾದ ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಸ್ತುತ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಸುಮಾರು 24 ಲಕ್ಷ ಪ್ರಕರಣಗಳು ಬಾಕಿ ಇವೆ. ಪೋಕ್ಸೋ ಹಾಗೂ ಮಾದಕ ದ್ರವ್ಯ (ಡ್ರಗ್ಸ್) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಜನರಲ್ಲಾಗುತ್ತಿರುವ ಜಾಗೃತಿ ಮತ್ತು ಅಪರಾಧಗಳನ್ನು ವರದಿ ಮಾಡುವ ಪ್ರವೃತ್ತಿಯೇ ಕಾರಣ. ಸಾರ್ವಜನಿಕರಲ್ಲಿ ಕಾನೂನು ಜಾಗೃತಿ ಮೂಡಿದಾಗ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹಾಗೂ ನ್ಯಾಯ ಪಡೆಯಲು ಸಾಧ್ಯವಾಗುತ್ತದೆ. ವಯಸ್ಕರಿಗಿಂತಲೂ ಹೆಚ್ಚಿನ ಹಕ್ಕುಗಳು ಮಕ್ಕಳಿಗೆ ಇವೆ, ಏಕೆಂದರೆ ಅವರು ಅಸಹಾಯಕರು. ಅಂತಹ ಮಕ್ಕಳನ್ನು ರಕ್ಷಿಸುವುದು ಮತ್ತು ಅವರಿಗೆ ಸುರಕ್ಷಿತ ವಾತಾವರಣ ನಿರ್ಮಿಸಿಕೊಡುವುದು ಸಮಾಜದ ಪ್ರಮುಖ ಜವಾಬ್ದಾರಿ ಎಂದರು.

ಇದನ್ನೂ ಓದಿದ್ದೀರಾ?ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಪ್ರತಿಯೊಂದು ಮಗುವಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಪೋಷಕರ ಕರ್ತವ್ಯ. ಆದರೆ ಹಲವೆಡೆ ಮಕ್ಕಳು ಶಾಲೆಯಿಂದ ಹೊರಗುಳಿದು ಹೋಟೆಲ್, ಕಾಫಿ ಪ್ಲಾಂಟೇಶನ್, ಪಟಾಕಿ ಕಾರ್ಖಾನೆ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಸಾರ್ವಜನಿಕರು ಇಂತಹ ಬಾಲಕಾರ್ಮಿಕರನ್ನು ಕಂಡ ತಕ್ಷಣ ’ಚೈಲ್ಡ್ ಹೆಲ್ಪ್‌ಲೈನ್ 1098’ ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ನ್ಯಾ. ಶಶಿಧರ್ ಶೆಟ್ಟಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ...

ರಾಯಚೂರು | ರಿಮ್ಸ್, ಓಪೆಕ್ ಆಸ್ಪತ್ರೆ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನವಿಲ್ಲ

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)...

ರಾಜ್ಯದಲ್ಲಿ ಮಿತಿಮೀರಿದ ದಲಿತರ ಮೇಲಿನ ದೌರ್ಜನ್ಯ: ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಮುಖಂಡರ ಗುಡುಗು

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ...