ಚಿಕ್ಕಮಗಳೂರು ನಗರ ಮರ್ಲೆ ಗ್ರಾಮದ ಕೆರೆಯಲ್ಲಿ ಶಾಲಾ ಮಕ್ಕಳು ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ.
ಮೃತರನ್ನು ತರುಣ್ (12), ಭುವನ್ (12) ಹಾಗೂ ಲಿಖಿತ್ (12) ಎಂದು ಗುರುತಿಸಲಾಗಿದೆ. ಇವರೆಲ್ಲರೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈ ಮಕ್ಕಳು ಮರ್ಲೆ ಗ್ರಾಮದ ಚಿಕ್ಕ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಕೆರೆಯ ಆಳವಾದ ಗುಂಡಿಯ ಭಾಗಕ್ಕೆ ತೆರಳಿದ ಮಕ್ಕಳಿಗೆ ನೀರಿನ ಆಳ ತಿಳಿಯದೆ ಮುಳುಗಿ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಹಾಗೂ ಪೋಷಕರು ಸ್ಥಳಕ್ಕೆ ಧಾವಿಸಿದ್ದು, ಮಕ್ಕಳ ಮೃತದೇಹಗಳನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು
ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




