ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,”ಕಸ್ತೂರಿ ರಂಗನ್ ವರದಿ ಬಗ್ಗೆ ಜನಸಾಮಾನ್ಯರೊಂದಿಗೆ ಚರ್ಚಿಸಲು ಕರ್ನಾಟಕ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸೂರಿ ರಂಗನ್ ಸಮಿತಿಯ ಶಿಫಾರಸುಗಳ ಕುರಿತು ಸ್ಥಳೀಯ ಜನರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶವು ಪರಿಸರ ಮತ್ತು ಜೀವ ವೈವಿಧ್ಯದ ದೃಷ್ಟಿಯಿಂದ ಮಹತ್ವದ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಅವಲಂಬಿಸಿರುವ ಜನರು ವಾಸಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ 137 ಹಳ್ಳಿಗಳ 2,23,440.41 ಹೆಕ್ಟೇರ್ ಪ್ರದೇಶ ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಒಳಪಡುವುದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದು ಜನಸಾಮಾನ್ಯರ ಬದುಕಿನ ಪ್ರಶ್ನೆಯಾಗಿದ್ದು. ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸದರು ಈ ಸಂದರ್ಭದಲ್ಲಾದರೂ ಸಂಸತ್ತಿನಲ್ಲಿ ಧ್ವನಿ ಎತ್ತಬೇಕೆಂದು ತಿಳಿಸಿದರು.
ಕಸ್ತೂರಿ ರಂಗನ್ ಸಮಿತಿಯು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸುವುದು ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಿದೆ. ಈ ಶಿಫಾರಸುಗಳ ಅಧಾರದ ಮೇಲೆ ಕೇಂದ್ರ ಸರ್ಕಾರದ ವತಿಯಿಂದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕರಡು ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ವರದಿಯ ಕುರಿತು ಸ್ಥಳೀಯ ಜನರ ಅಭಿಪ್ರಾಯ, ಸಲಹೆ ಮತ್ತು ಆಕ್ಷೇಪಣೆಗಳನ್ನು ಆಲಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪರ ಕಾಳಜಿ ಇರುವ ಎಲ್ಲರಿಗೂ ಜಿಲ್ಲಾ ಕಾಂಗ್ರೆಸ್ ಸ್ವಾಗತ ಬಯಸುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಪ್ರವೀಣ್ ಬೆಟ್ಟಗೇರ, ಪ್ರಕಾಶ್, ರೋಬಿ, ಶಿವಕುಮಾರ್ ಹಾಗೂ ಇನ್ನಿತರು ಉಪಸ್ಥಿತರಿದ್ದರು.




