ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಹಾಗೂ ದ್ವೇಷ ಭಾಷಣ ಮಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ SDPI ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮುಸ್ತಫ ಆಲ್ದೂರು, “ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ದ್ವೇಷ ಭಾಷಣ ಮಾಡುವ ಮೂಲಕ ಧರ್ಮಗಳ ನಡುವೆ ಸಂಘರ್ಷ ಉಂಟುಮಾಡಲು ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಸಿ.ಟಿ. ರವಿ ಅವರ ಹೇಳಿಕೆ ಖಂಡನೀಯ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪೊಲೀಸರು ಕಾನೂನಿನ ಅನ್ವಯ ಸೂಕ್ತ ವಿಧಿಗಳಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡು ಗಿಳಿಗಳ ರಕ್ಷಣೆ; ಆರೋಪಿಯ ಬಂಧನ
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಿಜ್ವಾನ್ ಹುಸೇನ್, ಮೊಹಮ್ಮದ್ ಮುಬಾರಕ್, ಜಿಲ್ಲಾ ಸಮಿತಿ ಸದಸ್ಯರಾದ ಸಿಕಂದರ್ ಪಾಷ, ನಾಸೀರ್ ಚಿಕ್ಕಮಗಳೂರು, ಚಿಕ್ಕಮಗಳೂರು ಕ್ಷೇತ್ರಾಧ್ಯಕ್ಷ ಅಝ್ಮತ್ ಪಾಷ, ಉಪಾಧ್ಯಕ್ಷ ಅಬ್ರಾರ್, ಕಾರ್ಯದರ್ಶಿ ಮೊಹಮ್ಮದ್ ಜೀಲಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.





