ಚಿಕ್ಕಮಗಳೂರು | ಯುವತಿ ಸಾವು : ಠಾಣೆ ಎದುರು ಪ್ರತಿಭಟನೆ 

Date:

ವಿಷ ಸೇವಿಸಿ ಯುವತಿ ಸಾವನಪ್ಪಿರುವ ಘಟನೆ ಬಗ್ಗೆ ಠಾಣೆ ಮುಂದೆ ಪ್ರತಿಭಟನೆ ನಡೆದಿರುವುದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.

- Advertisement -

ಮೃತಪಟ್ಟ ಯುವತಿ ಬಿ.ಎಸ್. ಪ್ರಿಯಾ ಎಂಬಾಕೆ, ಈ ಪ್ರತಿಭಟನೆಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಹೋರಾಟಗಾರ ಶ್ರೀನಿವಾಸ್, ಸಾವಿನ ಕುರಿತು ‘ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಮಾರು ಒಂದು ತಿಂಗಳ ಹಿಂದೆ ಯುವತಿ ಪ್ರಿಯಾ ವಿಷ ಸೇವಿಸಿದ್ದರು. ಈ ವೇಳೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಪೊಲೀಸರು ಯುವತಿಯಿಂದ ಮಾಹಿತಿ ಪಡೆದುಕೊಂಡಿದ್ದರು. ಆದರೆ ಈ ವಿಚಾರವನ್ನು ಪೋಷಕರ ಗಮನಕ್ಕೆ ತರದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಸಾವಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಯುವತಿಯ ಪೋಷಕರು ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಕೊಪ್ಪ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಆಸ್ಪತ್ರೆಯಿಂದ ಮನೆಗೆ ಮರಳಿದ ಎರಡು ದಿನಗಳ ಬಳಿಕ ಪ್ರಿಯಾಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಬಳಿಕ ಆಕೆಯನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ ವಿಷ ಸೇವಿಸಿರುವ ವಿಚಾರವನ್ನು ಸಂಬಂಧಿಕರಿಗೆ ತಿಳಿಸಿದ್ದಳು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಸೆಪ್ಟೆಂಬರ್ 30ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 3 ರಂದು ಮೃತ ಪಟ್ಟಿದ್ದಾರೆ. 

ಇದನ್ನೂ ಓದಿದ್ದೀರಾ?ಹಾಸನ | ದಲಿತರ ಭೂಮಿ, ಶಿಕ್ಷಣ, ಉದ್ಯೋಗ ಘನತೆಯ ಬದುಕಿನ ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಚರ್ಚಿಸಲಿ; ಡಿಎಚ್‌ಎಸ್

ಯುವತಿ ಪ್ರಿಯಾ ಸಾವಿಗೆ ಅರುಣ್ ಮತ್ತು ಮನೋಜ್ ನೀಡಿದ ಕಿರುಕುಳವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಸಂಬಂಧ ಅಕ್ಟೋಬರ್ 3ರಂದು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಈವರೆಗೆ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಇಂದು‌ ಎಸ್ಐಆರ್ ವಿರುದ್ಧ ಪ್ರತಿಭಟನೆ: ಸಂಜೀವಕುಮಾರ ನೀರಲಗಿ

"ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ, ಅರ್ಹ ಮತದಾರರಿಗೆ...

ಹುಲಿ ದಾಳಿಗೆ ಆದಿವಾಸಿ ಮಹಿಳೆ ಬಲಿ: ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಜಮೀನಿನ ಪಕ್ಕದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ಆದಿವಾಸಿ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ...

ಪತ್ರಕರ್ತರ ಕ್ರಿಕೆಟ್: ಕೊಡಗು ಅರೇಬಿಕಾ-ಮಂಡ್ಯ ಜಂಟಿ ಚಾಂಪಿಯನ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ...

ರಾಯಚೂರು | ಗ್ರಾಮೀಣ ಕಲೆಗೆ ಜೀವ ತುಂಬುವ ಕೆಲಸ ಎಲ್ಲರೂ ಮಾಡಬೇಕು: ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ

ನಶಿಸಿ ಹೋಗುತ್ತಿರುವ ಗ್ರಾಮೀಣ ಕಲೆಗಳಿಗೆ ಪುನಶ್ಚೇತನ ನೀಡುವ ಮೂಲಕ ಅವುಗಳಿಗೆ ಜೀವ...