ಬಿಳೇಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಏಕಾಏಕಿ ಕಾರು ಚಲಾಯಿಸಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ರಾಜ್ಯ ಸರ್ಕಾರ ಒಟ್ಟು 25,02,140 ರೂ. ಪರಿಹಾರವನ್ನು ಮಂಜೂರು ಮಾಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ ಎಂದು ಶಾಸಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಳೇಕಲ್ಲು ಗ್ರಾಮದಲ್ಲಿ ನಡೆದ ಈ ದುರ್ಘಟನೆಯಲ್ಲಿ ಸಾನ್ವಿ ಸ್ಥಳದಲ್ಲೇ ಮೃತಪಟ್ಟಿದ್ದು, ಅವರಿಗೆ 5 ಲಕ್ಷ ರೂ. ಪರಿಹಾರವನ್ನು ಮಂಜೂರು ಮಾಡಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ʼನಮಗೊಂದು ಸೂರು ಕೊಡಿ; ಇಲ್ಲವಾದ್ರೆ ಗುಡಿಸಲಿನಲ್ಲೇ ಪ್ರಾಣ ಬಿಡ್ತೇವೆʼ: ವಸತಿಹೀನರ ಅಳಲು
ಇದೇ ದುರ್ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿದ್ದು, ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಗಾಯಗೊಂಡಿದ್ದ ಏಳು ಮಂದಿಗೆ ಚಿಕಿತ್ಸಾ ವೆಚ್ಚವಾಗಿ 20,02,140 ರೂ. ಮಂಜೂರು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.




