ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ; ಶಾಸಕ ಎಚ್.ಡಿ. ತಮ್ಮಯ್ಯ

Date:

ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಆಯೋಜಿಸಿದ್ದ ‘ಚಿಕ್ಕಮಗಳೂರು ಇತಿಹಾಸ ದಾಖಲೆ’ ಕುರಿತ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಶುಕ್ರವಾರ ಆಯೋಜಿಸಲಾಯಿತು.

- Advertisement -

ಹೊಯ್ಸಳ ಮತ್ತು ಚೋಳರ ಕಾಲದ ಪುರಾತನ ದೇವಾಲಯಗಳು, ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದ ಜಿಲ್ಲೆಯ ಹೋರಾಟಗಾರರು ಹಾಗೂ ಜಿಲ್ಲೆಯ ಐತಿಹಾಸಿಕ ದಾಖಲೆಗಳ ಕುರಿತು ವಿದ್ಯಾರ್ಥಿಗಳು ಅರಿವು ಹೊಂದಬೇಕು. ಮಲೆನಾಡು ಹಾಗೂ ಬಯಲುಸೀಮೆಯನ್ನು ಒಳಗೊಂಡಿರುವ ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಜ್ಞಾನಾರ್ಜನೆ ಮಾಡಬೇಕು.  ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳು ಅವರ ಬದುಕಿನ ಒಂದು ಭಾಗವಾಗಬೇಕು. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧಿ 1927ರ ಜನವರಿಯಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದರು. ಅದರ ಶತಮಾನೋತ್ಸವ ಹಿನ್ನೆಲೆ ಮುಂಬರುವ ಜನವರಿಯಲ್ಲಿ ಬೃಹತ್ ಮಟ್ಟದ ಕಾರ್ಯಕ್ರಮ ಹಾಗೂ ಜಾಥಾವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಹಾತ್ಮರ ಜೀವನ ಚರಿತ್ರೆಯನ್ನು ಪರಿಚಯಿಸಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಜಿಲ್ಲೆಯ ಪ್ರವಾಸೋದ್ಯಮದ ವಿವಿಧ ತಾಣಗಳನ್ನು ಹೊಂದಿದೆ. ಎತ್ತರದ ಬೆಟ್ಟಗಳು, ವೇಗವಾಗಿ ಹರಿಯುವ ನದಿಗಳು, ಧಾರ್ಮಿಕ ಕ್ಷೇತ್ರಗಳು, ವೈವಿಧ್ಯಮಯ ಪಕ್ಷಿಜೀವನ, ನಿತ್ಯಹರಿದ್ವರ್ಣ ಕಾಡುಗಳು ಹಾಗೂ ಜಾನಪದ ಸಂಸ್ಕೃತಿ ಜಿಲ್ಲೆಯ ವೈಶಿಷ್ಟ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಪುರಾತತ್ವ ಇಲಾಖೆಯ ಎಎಸ್‌ಐ ಉಪ ಅಧೀಕ್ಷಕ ಎಚ್.ಆರ್. ದೇಸಾಯಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲೆ ತಸ್ನೀಮ್ ಕೌಸರ್ ಮನಿಯಾರ್ ಮಾತನಾಡಿ, ರಾಜ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶೇಷ ಸ್ಥಾನ ಹೊಂದಿದೆ. ಪೂರ್ವಿಕರ ಶಾಸನಗಳು ಹಾಗೂ ಹೊಯ್ಸಳರ ಕಾಲದ ಕಲ್ಲಿನ ಶಿಲ್ಪಗಳು ಜಿಲ್ಲೆಯ ಸಮಗ್ರ ಇತಿಹಾಸವನ್ನು ಪರಿಚಯಿಸುತ್ತವೆ ಎಂದು ತಿಳಿಸಿದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಗೆ ತಡೆ; ಆರೋಪಿಗಳ ಬಂಧನಕ್ಕೆ ದಸಂಸ ಒತ್ತಾಯ 

ಈ ಕಾರ್ಯಕ್ರಮದಲ್ಲಿ ಸಿಡಿಎ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಐಕ್ಯುಎಸ್‌ಸಿ ಸಂಯೋಜಕ ಗೋವರ್ಧನ್, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಉಪನಿರ್ದೇಶಕ ಎಚ್.ಎಲ್. ಮಂಜುನಾಥ್, ಕಾರ್ಯಕ್ರಮದ ಆಯೋಜಕ ಎಂ. ಲೋಕೇಶ್, ಹಂಪಿ ವಲಯದ ಉಪ ಅಧೀಕ್ಷಕ ಎಸ್.ಎಂ. ದೇವರಾಜ್ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥೆ ಪರ್ಜಾನ್ ಪರ್ವೀನ್ ಇನ್ನಿತರರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...