ಚಿಕ್ಕಮಗಳೂರು | ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ; ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ 

Date:

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ತಿಳಿಸಿದ್ದಾರೆ.

- Advertisement -

ಈಗಾಗಲೇ ಸಿಲಿಂಡರ್‌ಗಳ ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಎಲ್‌ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ. ನಗರ, ಪಟ್ಟಣ ಪ್ರದೇಶದ ಗ್ರಾಹಕರು ಒಂದು ಗೃಹಬಳಕೆ ಸಿಲಿಂಡರನ್ನು ಬುಕ್ ಮಾಡಿದ 25 ದಿನಗಳ ನಂತರ ಇನ್ನೊಂದು ಸಿಲಿಂಡರ್ ಅನ್ನು ಬುಕ್ ಮಾಡಲು ಹಾಗೂ ಗ್ರಾಮಾಂತರ ಪ್ರದೇಶದ ಗ್ರಾಹಕರು ಒಂದು ಗೃಹಬಳಕೆ ಸಿಲಿಂಡರನ್ನು ಬುಕ್ ಮಾಡಿದ 44 ದಿನಗಳ ನಂತರ ಇನ್ನೊಂದು ಸಿಲಿಂಡರ್ ಅನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು ಅಡುಗೆ ಅನಿಲ ಮಿತಬಳಕೆ ಮಾಡುವಂತೆ ಕೋರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ಹಾಗೂ ಗೃಹಬಳಕೆ ಸಿಲಿಂಡರನ್ನು ಈ ಹಿಂದಿನಂತೆ ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡುವುದರಿಂದ ಗ್ರಾಹಕರು ಸಿಲಿಂಡರ್ ಪಡೆಯಲು ಗ್ಯಾಸ್ ಏಜೆನ್ಸಿಗೆ ತೆರಳದಂತೆ ವಿನಂತಿಸಲಾಗಿದೆ. ಎಲ್‌ಪಿಜಿ ವಿತರಣೆಯಲ್ಲಿ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಈ ದೂರವಾಣಿ ಸಂಖ್ಯೆಗಳ (08262-237715, 9483325944) ಮೂಲಕ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಶಾಲೆ ಉಳಿವಿಗೆ ಹೋರಾಟಕ್ಕೆ ಸಿದ್ಧ; ಕೆಸರಿಕೆಹಳ್ಳಿ ಗ್ರಾಮಸ್ಥರು

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಹಾಗೂ ದಿ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯೂಲೇಷನ್ ಆಫ್ ಸಪ್ಲೈ ಅಂಡ್ ಡಿಸ್ಟ್ರಿಬ್ಯೂಷನ್) ಆರ್ಡರ್ 2೦೦೦ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಗೃಹಬಳಕೆ ಗ್ಯಾಸ್ ವಿತರಣಾ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸುವಂತೆ ಜಿಲ್ಲಾಧಿಕಾರಿ ಎನ್. ಎಂ ನಾಗರಾಜ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...