ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಸರ್ಕಾರ ತಾಲ್ಲೂಕನ್ನು ಮಧ್ಯಮ ಬರಪೀಡಿತ ತಾಲ್ಲೂಕು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ರೈತರ ಬೆಳೆ ಹಾನಿಯನ್ನು ನಿಖರವಾಗಿ ದಾಖಲಿಸುವ ಉದ್ದೇಶದಿಂದ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಜಂಟಿ ತಂಡದಿಂದ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ತಹಶೀಲ್ದಾರ್ ರಶ್ಮಿ ಎಚ್.ಜೆ. ತಿಳಿಸಿದ್ದಾರೆ.
ತಾಲ್ಲೂಕಿನ ಎಲ್ಲ ರೈತರು ತಮ್ಮ ಗ್ರಾಮಗಳಿಗೆ ಬರುವ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಜಂಟಿ ಬೆಳೆ ಹಾನಿ ಸಮೀಕ್ಷೆಗೆ ಅಗತ್ಯ ಸಹ ಕಾರ ನೀಡಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ನಕಲಿ ನಾಟಿ ತುಪ್ಪ; ಆಹಾರ ಅಧಿಕಾರಿಗಳು ದಾಳಿ
ಬೆಳೆ ಹಾನಿ ಪರಿಹಾರ ಪಡೆಯಲು ಸಮೀಕ್ಷೆಯಲ್ಲಿ ಬೆಳೆ ವಿವರ ದಾಖಲಾಗಿರುವುದು ಕಡ್ಡಾಯವಾಗಿದೆ. ಸಮೀಕ್ಷೆಯಲ್ಲಿ ದಾಖಲಾದ ಬೆಳೆ ಹಾಗೂ ಜಂಟಿ ಬೆಳೆ ಹಾನಿ ಸಮೀಕ್ಷೆ ವೇಳೆ ಬೆಳೆ ಒಂದೇ ಆಗಿರಬೇಕು. ಸಮೀಕ್ಷೆಯಲ್ಲಿ ದಾಖಲಾಗದಿದ್ದರೆ ಅಥವಾ ಎರಡೂ ಸಮೀಕ್ಷೆಗಳಲ್ಲಿನ ಬೆಳೆ ವಿವರಗಳಲ್ಲಿ ವ್ಯತ್ಯಾಸವಿದ್ದರೆ ಬೆಳೆ ಹಾನಿ ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.




