ಚಿಕ್ಕಮಗಳೂರು | ಈದ್ ಮಿಲಾದ್: ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು 

Date:

ಚಿಕ್ಕಮಗಳೂರು ನಗರದ MES ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಈದ್ ಮಿಲಾದ್ (Eid Milad) ಆಚರಣೆ ನಡೆಸದಂತೆ ಆಕ್ರೋಶ ವ್ಯಕ್ತಪಡಿಸಿದ್ದ ವ್ಯಕ್ತಿಗಳ ಮೇಲೆ ಎಫ್‌ಐಆರ್ ದಾಖಲಾಗಿದೆ.

- Advertisement -

ನಡೆದಿದ್ದೇನು?ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಡಳಿತ ಮಂಡಳಿ ಈದ್ ಮಿಲಾದ್ ಆಚರಣೆಗೆ ಮುಂದಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಡ್ರೆಸ್ ಕೋಡ್ ಪಾಲಿಸುವಂತೆ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿದ್ದಾರೆ. ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನೇರವಾಗಿ ಶಾಲೆಗೆ ತೆರಳಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಶಾಲೆ ಪ್ರಿನ್ಸಿಪಾಲ್ ನೀಡಿದ ದೂರಿನನ್ವಯ ಹಿಂದೂ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರಾದ ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್, ರಾಜೇಗೌಡ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಬಿಎನ್‌ಎಸ್ (BNS) ಸೆಕ್ಷನ್ 329(4), 352 ಹಾಗೂ 190ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಎಫ್​​ಐಆರ್​ನಲ್ಲಿ ಏನಿದೆ? ಸುಮಾರು 02 ವರ್ಷಗಳಿಂದ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್​​ನಲ್ಲಿ ನರ್ಸರಿಯಿಂದ 06ನೇ ತರಗತಿ ವರೆಗೆ ಕ್ಲಾಸ್​ಗಳು ನಡೆಯುತ್ತಿದ್ದು, ಅದಕ್ಕೆ ನಾನು ಪ್ರಾಂಶುಪಾಲೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ನಮ್ಮ ಶಾಲೆಯಲ್ಲಿ ಉಳಿದಂತೆ ಒಟ್ಟು 21 ಜನ ಶಿಕ್ಷಕರಿದ್ದು ಅದರಲ್ಲಿ 18 ಜನ ಮಹಿಳೆಯರಿದ್ದು, ಇಬ್ಬರು ಮಾತ್ರ ಶಿಕ್ಷಕರಿದ್ದಾರೆ. ಶಾಲೆಯ ನಿಯಮದಂತೆ ಮಕ್ಕಳಿಗೆ ಪ್ರತಿ ಶನಿವಾರ ಕಲರ್ ಡ್ರೆಸ್ ಇದ್ದು ಅದೇ ಪ್ರಕಾರ ಆಗಸ್ಟ್​​ 29ರಂದು ಮಕ್ಕಳು ಕಲರ್ ಡ್ರೆಸ್​​ನಲ್ಲಿ ಶಾಲೆಗೆ ಬರುತ್ತಿದ್ದರು.

ಇದನ್ನೂ ಓದಿದ್ದೀರಾ?ಹಾಸನ | ನಿಶ್ಚಲಾನಂದ ಸ್ವಾಮಿ ಹೇಳಿಕೆಗೆ  ಸಿಪಿಐಎಂ ಖಂಡನೆ 

ಇಂದು ಬೆಳಗ್ಗೆ ಸುಮಾರು 09-15 ಗಂಟೆ ಸಮಯಕ್ಕೆ 07-08 ಜನರ ಗುಂಪು ಏಕಾಏಕಿ ಶಾಲೆಗೆ ನುಗ್ಗಿ ಈದ್ ಮಿಲಾದ್ ಹಬ್ಬದ ಆಚರಣೆ ಮಾಡುತ್ತಿದ್ದೀರಾ ಎಂದು ಜೋರು ಜೋರಾಗಿ ಕೂಗಾಡಿದರು. ನಾನು ಆ ರೀತಿ ಯಾವುದೇ ಆಚರಣೆ ಮಾಡುತ್ತಿಲ್ಲ. ಮಕ್ಕಳು ಶಾಲಾ ನಿಯಮದಂತೆ ಕಲರ್ ಡ್ರೆಸ್​ನಲ್ಲಿ ಬಂದಿದ್ದಾರೆ ಎಂದು ಹೇಳಿದರೂ ಕೇಳದೇ ಬಾಯಿಗೆ ಬಂದ ಹಾಗೆ ಬೈಯುತ್ತ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ತಕ್ಷಣ ನಾನು 112 ಕರೆ ಮಾಡಿ ವಿಚಾರ ತಿಳಿಸಿದೆ. ಪೊಲೀಸ್​​​ ಬಂದು ಅವರನ್ನು ಕಳುಹಿಸಿದ್ದಾರೆ. ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್ ಹಾಗೂ ರಾಜೇಗೌಡ ಮತ್ತು ಇನ್ನಿತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...