ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಇಒ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಕೆ ಘರ್ಷಣೆ ದೂರಿಗೆ ಪ್ರತೀ ದೂರು ದಾಖಲು 

- Advertisement -

ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರ ಮೇಲೆ ಬ್ಲಾಕ್ಕಾಂ ಗ್ರೆಸ್ ಅಧ್ಯಕ್ಷ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಕಸ್ತೂರಿ ರಂಗನ್ ವರದಿಸಂಬಂಧ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ರಾತ್ರಿ ಊಟ ಮುಗಿಸಿಕೊಂಡು ಹೊರಬರುತ್ತಿದ್ದ ಶೃಂಗೇರಿ ತಾಲೂಕು ಪಂಚಾಯಿತಿ ಇಒ ಸುದೀಪ್ ಅವರ ಮೇಲೆ ಕೊಪ್ಪ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಕುಕ್ಕೂಡಿಗೆ ರವೀಂದ್ರ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಹಿನ್ನೇಯಲ್ಲಿ ಹೋಟೆಲ್‌ನಿಂದ ಹೊರಬರುತ್ತಿದ್ದಂತೆ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಇಓ ಸುದೀಪ್ ಆರೋಪಿಸಿದ್ದು, ಗಾಯಗೊಂಡಿರುವ ಅವರು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಇಓ ನೀಡಿದ ದೂರಿನ ಮೇರೆಗೆ ಕುಕ್ಕೂಡಿಗೆ ರವೀಂದ್ರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಮತ್ತೊಂದೆಡೆ, ಇಓ ಸುದೀಪ್ ಕೂಡ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಾಗೇಶ್ ಎಂಬುವರು ಪ್ರತಿದೂರು ನೀಡಿದ್ದಾರೆ. 

ಇದನ್ನೂ ಓದಿದ್ದೀರಾ?ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಈ ಘಟನೆ ಸಂಬಂಧ ಬಾಳೆಹೊನ್ನೂರು ಠಾಣೆ ಪೊಲೀಸರು ಎರಡೂ ಕಡೆಯಿಂದ ದೂರು, ಪ್ರತಿದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...

ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...