ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗುಣವಂತೆ ಗ್ರಾಮದ ಚೋಳಕೊಪ್ಪದಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಗಾಂಧಿ ಗ್ರಾಮದ ಪ್ರವೀಣ್ ಬಿನ್ ಜಯರಾಮ್ (39) ಎಂಬಾತನು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರಮೋದ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ
ಕೊಪ್ಪ ಪೊಲೀಸ್ ಠಾಣೆಯಲ್ಲಿ ಮೊ.ನಂ. 72/2026, ಕಲಂ 306ರಂತೆ ಪ್ರಕರಣ ದಾಖಲಿಸಿ, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಸುಮಾರು ₹10 ಲಕ್ಷ ಮೌಲ್ಯದ 76 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯನ್ನು ಕೊಪ್ಪ ತಾಲೂಕಿನ ಪಿಎಸ್‌ಐ ಮಧು ಅವರ ನೇತೃತ್ವದಲ್ಲಿ ನಡೆಸಲಾಗಿದೆ.





