ಚಿಕ್ಕಮಗಳೂರು | ಸರ್ಕಾರ ಯೋಜನೆ, ಸವಲತ್ತುಗಳು ನೇರ ಜನರ ಮನೆಬಾಗಿಲಿಗೆ ತಲುಪಬೇಕು; ಹೆಚ್. ಡಿ ತಮ್ಮಯ್ಯ 

Date:

ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ ಗ್ರಾಮದ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಪ್ರಜಾ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರಜಾಸೇವಾ ಆಂದೋಲನ’ ಜನಸಂಪರ್ಕ ಸಭೆಯಲ್ಲಿ ಅಧ್ಯಕ್ಷತೆಯನ್ನು ಶಾಸಕ ಎಚ್. ಡಿ.ತಮ್ಮಯ್ಯ  ವಹಿಸಿ ಸರ್ಕಾರದ ಯೋಜನೆಗಳು ಮತ್ತು ಸವಲತ್ತುಗಳು ನೇರವಾಗಿ ಜನರ ಮನೆಬಾಗಿಲಿಗೆ ತಲುಪಬೇಕು. ಅಧಿಕಾರಿಗಳು ಕಾಟಾಚಾರಕ್ಕೆ ಸಭೆ ನಡೆಸದೆ, ಸಾರ್ವಜನಿಕರ ಕುಂದುಕೊರತೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಎಂದು ತಿಳಿಸಿದರು.

- Advertisement -

ಜನರು ಅಲೆದಾಡುವುದನ್ನು ತಪ್ಪಿಸಲು ಸರ್ಕಾರವೇ ಅಧಿಕಾರಿಗಳ ತಂಡವನ್ನು ಮನೆಬಾಗಿಲಿಗೆ ಕಳುಹಿಸಿ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ವಿನೂತನ ವ್ಯವಸ್ಥೆ ತಂದಿದೆ. ಶಾಸಕಾಂಗ ಹಾಗೂ ಕಾರ್ಯಾಂಗ ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರದ ಉದ್ದೇಶ ಈಡೇರಲು ಸಾಧ್ಯ ಎಂದರು. ಹಿಂದಿನ ಸರ್ಕಾರದ ಅವಧಿಯಲ್ಲಿ ವಿಧಿಸಲಾಗಿದ್ದ ಕೆಲ ಕಠಿಣ ನಿಯಮಗಳಿಂದಾಗಿ ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ನಿಂತುಹೋಗಿತ್ತು. ವಾರ್ಷಿಕ ಆದಾಯ ಮಿತಿ ₹₹32 ಸಾವಿರ ಇದ್ದುದನ್ನು ಈಗ ಶಾಸಕರ ಒತ್ತಾಯದ ಮೇರೆಗೆ ₹₹1.20 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಲಕ್ಯಾ ಹೋಬಳಿಯೊಂದರಲ್ಲೇ 2,400ಕ್ಕೂ ಹೆಚ್ಚು ಅರ್ಹರು ಇದರಿಂದ ವಂಚಿತರಾಗಿದ್ದರು. ಈಗಾಗಲೇ 600 ಜನರ ದಾಖಲೆ ಪರಿಶೀಲಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ವಾರದಲ್ಲಿ ಅವರ ಖಾತೆಗೆ ಹಣ ಜಮೆಯಾಗಲಿದೆ. ಉಳಿದ 1,800 ಫಲಾನುಭವಿಗಳ ಮನೆಬಾಗಿಲಿಗೆ ಕಂದಾಯ ಅಧಿಕಾರಿಗಳು ಆಗಮಿಸಿ ದಾಖಲೆ ಪಡೆಯಲಿದ್ದು, ತಾಲ್ಲೂಕು ಕಚೇರಿಗೆ ಅಲೆಯುವ ಅಗತ್ಯವಿಲ್ಲ ಎಂದು ಶಾಸಕ ಹೆಚ್. ಡಿ ತಮ್ಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...