ಚಿಕ್ಕಮಗಳೂರು | ವಿದ್ಯಾ ಹರ್ಬ್ಸ್ ಕಾರ್ಖಾನೆಯಲ್ಲಿ ಪೋಷ್ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

Date:

​ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘ (ರಿ.) ಹಾಗೂ ವಿದ್ಯಾ ಹರ್ಬ್ಸ್ ಪ್ರೈವೇಟ್ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ ಹರಿಹರದಹಳ್ಳಿಯ ವಿದ್ಯಾ ಹರ್ಬ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

- Advertisement -

‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳವು ಕೇವಲ ವ್ಯಕ್ತಿಯ ಮೇಲಿನ ದೌರ್ಜನ್ಯವಲ್ಲ, ಬದಲಿಗೆ ಅದು ಸಂವಿಧಾನದತ್ತ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಕಿಣಿ ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

 ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ-2013’ (ಪೋಷ್ ಆಕ್ಟ್) ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಕಿಣಿ ಅವರು ತಿಳಿಸಿದರು.

​ಸಂವಿಧಾನದ 14, 15 ಹಾಗೂ 21ನೇ ವಿಧಿಗಳು ಸಮಾನತೆ ಮತ್ತು ಘನತೆಯಿಂದ ಬದುಕುವ ಹಕ್ಕನ್ನು ಖಾತರಿಪಡಿಸಿವೆ. ಕಾರ್ಯಸ್ಥಳದಲ್ಲಿ ಕೇವಲ ಸಿಸಿಟಿವಿ ಅಳವಡಿಸಿದರೆ ಸಾಲದು, ಮಹಿಳೆಯರಲ್ಲಿ ಸುರಕ್ಷತಾ ಭಾವನೆ ಮೂಡಿಸುವ ಆರೋಗ್ಯಕರ ವಾತಾವರಣ ನಿರ್ಮಾಣವಾಗಬೇಕು; ಕಾನೂನಿನ ಸದ್ಬಳಕೆಯಾಗಬೇಕೇ ಹೊರತು ದುರ್ಬಳಕೆಯಾಗಬಾರದು ಎಂದು ಕಿರಣ್ ಕಿಣಿ ಹೇಳಿದರು.  

​ವಕೀಲರ ಸಂಘದ ಅಧ್ಯಕ್ಷ ಹರೀಶ್ ಸಿಂಗಟಗೆರೆ ಮಾತನಾಡಿ, ರಾಜಸ್ಥಾನದ ‘ಸಾಥಿ’ ಕಾರ್ಯಕರ್ತೆ ಭನ್ವರಿ ದೇವಿ ಅವರ ಹೋರಾಟ ಹಾಗೂ ಸುಪ್ರೀಂ ಕೋರ್ಟ್‌ನ ‘ವಿಶಾಖಾ ಮಾರ್ಗಸೂಚಿ’ಗಳ ಫಲವಾಗಿ 2013ರಲ್ಲಿ ಪೋಷ್ ಕಾಯ್ದೆ ಜಾರಿಗೆ ಬಂದ ಹಿನ್ನೆಲೆಯನ್ನು ವಿವರಿಸಿದರು.  

​ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಮಾತನಾಡಿ, ಮಹಿಳೆಯರ ರಕ್ಷಣೆಗಾಗಿ ಪೋಷ್, ಪೋಕ್ಸೋ, ಬಾಲ್ಯ ವಿವಾಹ ನಿಷೇಧ, ಭ್ರೂಣ ಪತ್ತೆ ನಿಷೇಧ ಹಾಗೂ ವರದಕ್ಷಿಣೆ ನಿಷೇಧದಂತಹ ಹಲವು ಕಾಯ್ದೆಗಳು ಜಾರಿಯಲ್ಲಿದ್ದರೂ, ಇಂದಿಗೂ ಹೆಣ್ಣು ಭ್ರೂಣ ಹತ್ಯೆಯಂತಹ ಅನಿಷ್ಟ ಪದ್ಧತಿಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿವೆ ಎಂದು ವಿಷಾದ ವ್ಯಕ್ತಪಡಿಸಿದರು.  

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ಈ ವೇಳೆ ​ಸಹಾಯಕ ಅಭಿರಕ್ಷಕರಾದ ಕುಮಾರಿ ಶಶಿ ಅವರು ಪೋಷ್ ಕಾಯ್ದೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ರಂಗನಾಥ್, ಕಾರ್ಖಾನೆಯ ಆಡಳಿತ ಅಧಿಕಾರಿಗಳು ಹಾಗೂ ನೌಕರರು-ಕಾರ್ಮಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ದಾಳಿ:ಪಿಡಿಒ ದೂರು,ತನಿಖೆ ಚುರುಕು

ತಾಲೂಕಿನ ಬಟ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನರಾಯನಹಳ್ಳಿ ಗ್ರಾಮದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ...

ಚಿಕ್ಕಬಳ್ಳಾಪುರ | ಗ್ರಾಮಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಲಿ: ಈಶ್ವರ ಖಂಡ್ರೆ

ಗ್ರಾಮಗಳು ದೇಶದ ಅಭಿವೃದ್ಧಿಯ ಅಡಿಪಾಯವಾಗಿದ್ದು, ಗ್ರಾಮೀಣ ಭಾಗದ ಸಮಗ್ರ ಪ್ರಗತಿಗೆ ಪ್ರತಿಯೊಬ್ಬರೂ...

ಬಾಗೇಪಲ್ಲಿ | ತಾಲ್ಲೂಕಿನಾದ್ಯಂತ ಪಡಿತರ ವಿತರಣೆಯ ಸರ್ವರ್ ಸಮಸ್ಯೆ ತಕ್ಷಣ ಪರಿಹರಿಸಿ:

ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಕಳೆದ ಎರಡು– ಮೂರು ದಿನಗಳಿಂದ ಸರ್ವರ್ ಹಾಗೂ...

ಹೊನಗನಹಳ್ಳಿ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ವಿಜಯಪುರ ಜಿಲ್ಲೆಯ ಹುಬ್ಬಳ್ಳಿ ರಸ್ತೆಯ ಹೊನಗನಹಳ್ಳಿ ಗ್ರಾಮದ ಸಮೀಪದ ಜಮೀನಿನಲ್ಲಿ ಅಪರಿಚಿತ...