ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹೆಚ್.ಕೆ. ದಿನೇಶ್ ಅವರು ಹಿಂಪಡೆದು, ಪುನರ್ ಪರಿಶೀಲನೆಯ ಬಳಿಕ ಲಿಖಿತ ಸ್ಪಷ್ಟನೆ; ಆಕ್ಷೇಪಣೆಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ಮನವಿ ಈ ಕುರಿತು ಲಿಖಿತ ಸ್ಪಷ್ಟನೆ ನೀಡಿದ್ದಾರೆ.
ಮತದಾರರ ಪಟ್ಟಿಯಲ್ಲಿ ಕೆಲವು ಹೆಸರುಗಳ ಕುರಿತು ಆಕ್ಷೇಪಣೆ ಸಲ್ಲಿಸಿ, ಸೆಪ್ಟೆಂಬರ್ 21 ಮತ್ತು 22ರಂದು ನಮೂನೆ–7ರ ಮೂಲಕ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಬಳಿಕ ಸಂಬಂಧಪಟ್ಟ ಮತದಾರರ ವಿವರಗಳನ್ನು ಪುನರ್ ಪರಿಶೀಲಿಸಿದ ಸಂದರ್ಭದಲ್ಲಿ, ಆಕ್ಷೇಪಣೆ ಸಲ್ಲಿಸಲಾಗಿದ್ದ ಮತದಾರರು ಮತದಾರರ ಪಟ್ಟಿಯಲ್ಲಿ ಇರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ, ತಾವು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆಯುತ್ತಿರುವುದಾಗಿ ದಿನೇಶ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್
ಈ ಹಿನ್ನೆಲೆಯಲ್ಲಿ, ಈ ಹಿಂದೆ ಸಲ್ಲಿಸಿರುವ ನಮೂನೆ–7ರ ಆಕ್ಷೇಪಣೆಗಳ ಆಧಾರದ ಮೇಲೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಆಕ್ಷೇಪಣೆಗಳ ಕುರಿತು ನಂತರದ ಪರಿಶೀಲನೆಯ ಆಧಾರದ ಮೇಲೆ ಸ್ಪಷ್ಟನೆ ನೀಡಿರುವುದು ಇದೀಗ ಗಮನ ಸೆಳೆದಿದೆ. ಈ ಮೂಲಕ ತಮ್ಮ ಹಿಂದಿನ ಆಕ್ಷೇಪಣೆಗಳನ್ನು ಅಧಿಕೃತವಾಗಿ ಹಿಂಪಡೆದಿರುವುದನ್ನು ಹೆಚ್.ಕೆ. ದಿನೇಶ್ ಅವರು ಪತ್ರದ ಮೂಲಕ ತಿಳಿಸಿದ್ದಾರೆ.
This video cannot be played in your browser. Open the video directly





