ಚಿಕ್ಕಮಗಳೂರು | ಪತಿಯಿಂದ ಪತ್ನಿಗೆ ಹಲ್ಲೆ; ಬೆದರಿಕೆ ಆರೋಪ 

Date:

ದರ್ಗಾಕ್ಕೆ ತೆರಳುತ್ತಿದ್ದ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಮಹಿಳೆಯ ಗಂಡ ಮತ್ತು ಆತನ ಸ್ನೇಹಿತರ ತಂಡ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ದರ್ಗಾ ಸಮೀಪದಲ್ಲಿ ನಡೆದಿದೆ.

- Advertisement -

ಬೇಲೂರು ಟೌನ್ ನಿವಾಸಿ ಮಹಿಳೆಯೊಬ್ಬರು ತಮ್ಮ ಕುಟುಂಬದ ಸದಸ್ಯರೊಂದಿಗೆ ಕಾರಿನಲ್ಲಿ ಮಂಗಳೂರು ದರ್ಗಾಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳೆಯ ಗಂಡ ಸೈಯದ್ ಆಸಿಫ್ ಆತನ ಸ್ನೇಹಿತರಾದ ಆಶಿಮ್, ವಾಸಿಕ್, ಪವನ್ ಹಾಗೂ ಶಿಫಾನ್ ಜೊತೆ ಮತ್ತೊಂದು ಕಾರಿನಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾರಿನಲ್ಲಿದ್ದ ಮಹಿಳೆಯ ತಲೆಕೂದಲು ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರಾಜ್ಯ ರೈತ ಸಂಘ ಸಮಿತಿ ಮೇರೆಗೆ ತಾಲೂಕು ಸಮಿತಿ ವಜಾ; ಡಿ. ಮಹೇಶ್ 

ಗಲಾಟೆ ಬಿಡಿಸಲು ಮುಂದಾದ ಮಹಿಳೆಯ ಕುಟುಂಬಸ್ಥರ ಮೇಲೂ ಸೈಯದ್ ಆಸಿಫ್ ಹಾಗೂ ಆತನ ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ಇತರೆ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ಆರೋಪಿಗಳು ಪ್ರಾಣ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಕುಟುಂಬಸ್ಥರು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದು, ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...