ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಪಿಎಸ್ಐ ಮತ್ತು ಸಿಬ್ಬಂದಿಯವರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲು ಗ್ರಾಮದ ಕೆಳಕೊಪ್ಪ ನಿವಾಸಿ ನಂದೀಶ್ ಕೆ.ಆರ್ (38) ಎಂಬಾತನನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಯಾವುದೇ ಪರವಾನಗಿ ಇಲ್ಲದೆ ಕಾರಂಗಿಯ ತುಂಗಾ ನದಿಯಿಂದ ಮರಳನ್ನು ಕಳ್ಳತನ ಮಾಡಿ, ಅಕ್ರಮವಾಗಿ ಸಾಗಿಸುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬೀದಿ ನಾಯಿ ದಾಳಿಗೆ ಮೂರು ಕುರಿ ಸಾವು
ಪೊಲೀಸರು ಪಂಚರ ಸಮಕ್ಷಮದಲ್ಲಿ ಪರಿಶೀಲನೆ ನಡೆಸಿದಾಗ ಟ್ರ್ಯಾಕ್ಟರ್ನಲ್ಲಿ ಮರಳು ಇರುವುದು ದೃಢಪಟ್ಟಿದೆ. ಟ್ಯಾಕ್ಟರ್ (KA 14 TA 3670) ಮತ್ತು ಅದರಲ್ಲಿದ್ದ ಸುಮಾರು 7,500 ರೂ ಮೌಲ್ಯದ 3 ಟನ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.




