ಚಿಕ್ಕಮಗಳೂರು | ಅಕ್ರಮ ಹಣ ವರ್ಗಾವಣೆ: ಸಿಬಿಐ ತನಿಖೆಗೆ ಹೆಚ್.ಪಿ ಮಂಜೇಗೌಡ ಆಗ್ರಹ 

Date:

ಚಿಕ್ಕಮಗಳೂರು ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮಾತನಾಡಿ, “ಮುಗ್ಧರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾವಣೆ ಆಗಿರುವ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನೆಡೆಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಕೈಗೊಳ್ಳಬೇಕು. ವಿಧಾನಪರಿಷತ್ ಸದಸ್ಯ ಸಿ.ಟಿ ರವಿರವರು ಈ ಪ್ರಕರಣದ ಬಗ್ಗೆ ಸ್ವಯಂಘೋಷಿತ ತನಿಖಾ ಸಂಸ್ಥೆಯಂತೆ ವರ್ತಿಸಿ ಶಾಸಕ ತಮ್ಮಯ್ಯ ಅವರ ಹೆಸರನ್ನು ಎಲ್ಲಾ ಕಡೆ ಹೇಳಿ ಅಪಪ್ರಚಾರ ಮಾಡುವ ಮೂಲಕ ಅವರಿಗೆ ತೇಜೋವದೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

- Advertisement -

ಶಾಸಕ ಹೆಚ್.ಡಿ ತಮ್ಮಯ್ಯರವರು ಕೈಗೊಳ್ಳುತ್ತಿರುವ ಜನಪರ ಕೆಲಸಗಳನ್ನು ಸಹಿಸದೆ ಈ ರೀತಿಯ ಅಪಪ್ರಚಾರದಲ್ಲಿ ತೊಡಗುತ್ತಿದ್ದಾರೆ, ಹಣ ವರ್ಗಾವಣೆಯ ಪ್ರಕರಣದ ಪಾತ್ರ ದಾರಿಗಳು ಹಾಗೂ ಸೂತ್ರದಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಕೆಲ ವ್ಯಕ್ತಿಗಳು ಹೊರಬರುವ ಮುನ್ನ ಬೇರೆ-ಬೇರೆ ಕಾರಣಗಳಿಗೆ ಎಲ್ಲಾ ಪಕ್ಷದ ಮುಖಂಡರುಗಳನ್ನು ಬೇಟಿಯಾಗುತ್ತಿದ್ದು, ಇದೇ ಕಾರಣವನ್ನು ಮುಂದಿಟ್ಟು ರಾಜಕೀಯ ಮುಖಂಡರು, ಶಾಸಕರು ತಪ್ಪು ಮಾಡಿದ್ದಾರೆಂದು ಅನುಮಾನ ಬರುವಂತೆ ಮಾತನಾಡಿದ್ದಾರೆ ಎಂದು ದೂರಿದರು. ವಿರೋಧ ಪಕ್ಷದವರಾಗಿ ರಚನಾತ್ಮಕ ಟೀಕೆಗಳನ್ನು ಮಾಡಲಿ ಕೇವಲ ರಾಜಕೀಯ ಕಾರಣಕ್ಕಾಗಿ ಶಾಸಕ ತಮ್ಮಯ್ಯನವರ ವ್ಯಕ್ತಿತ್ವ ಹರಣ ಮಾಡಲು ಮುಂದಾದರೆ ನಿಮ್ಮ ಅವಧಿಯಲ್ಲಿ ನೆಡೆದಿರುವ ಕಾಮಗಾರಿಗಳ ಬಗ್ಗೆ ಕಾಂಗ್ರೆಸ್ ಪಕ್ಷ ಸಮಗ್ರ ತನಿಖೆ ನಡೆಸಲಿದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | 8ಲಕ್ಷ ಸಾಲಕ್ಕೆ 15000ರೂ. ಗೆ ಇತ್ಯರ್ಥಪಡಿಸಿದ ನ್ಯಾಯಾಲಯ 

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಸಂಶೋಧನಾ ವಿಭಾಗದ ಜಿಲ್ಲಾಧ್ಯಕ್ಷ ಹಿರೇಗೌಜ ಶಿವು, ನಗರಸಭೆ ಸದಸ್ಯ ಪರಮೇಶ್ ರಾಜ್ ಅರಸ್, ಮುಖಂಡರಾದ ನಾಗೇಶ್, ಪ್ರಕಾಶ್, ಶರತ್ ಅಹ್ಮದ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...