ಚಿಕ್ಕಮಗಳೂರು | 40 ಮಂದಿಯೊಂದಿಗೆ ಚಾರಣಕ್ಕೆ ಬಂದಿದ್ದ ಕೇರಳದ ಬಾಲಕಿ ನಾಪತ್ತೆ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತಕ್ಕೆ ಕುಟುಂಬದೊಂದಿಗೆ ಪ್ರವಾಸ ಬಂದಿದ್ದ ಕೇರಳದ 14 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾರೆ. ಆಕೆಗಾಗಿ ಪೊಲೀಸರು ಕಳೆದ 24 ಗಂಟೆಗಳಿಂದ ಕಾಲ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

10ನೇ ತರಗತಿ ವಿದ್ಯಾರ್ಥಿನಿಯಾದ ಶ್ರೀನಂದಾ, ಏಪ್ರಿಲ್ 7 ರಂದು ತನ್ನ ಸುಮಾರು 40 ಸಂಬಂಧಿಕರೊಂದಿಗೆ ಚಂದ್ರದ್ರೋಣ ಬೆಟ್ಟದ ಪ್ರವಾಸಿ ತಾಣವೊಂದಕ್ಕೆ ಚಾರಣಕ್ಕೆ ಹೋಗಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೊಲೀಸರ ಪ್ರಕಾರ, ಮಂಗಳವಾರ ಸಂಜೆ 5:30ರ ಸುಮಾರಿಗೆ ಕತ್ತಲಾಗುತ್ತಿದ್ದಂತೆ ಆಕೆ ನಾಪತ್ತೆಯಾಗಿದ್ದಾಳೆ. ಆರಂಭದಲ್ಲಿ ಕುಟುಂಬ ಸದಸ್ಯರು ಸತತವಾಗಿ ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗದ ಕಾರಣ ಪೊಲೀಸರಿಗೆ ದೂರು ನೀಡಿದ್ದಾರೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಡಂ ಪಳಿಪುರಂ ಗ್ರಾಮದ ನಿವಾಸಿ ಶಶಿಕುಮಾರ್ ಕೆ.ಜಿ (55) ಎಂಬುವರು ಏಪ್ರಿಲ್ 8 ರಂದು ಚಿಕ್ಕಮಗಳೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತಕ್ಷಣವೇ ಬೆಟ್ಟದ ಆಳವಾದ ಘಾಟಿ ಮತ್ತು ಕಡಿದಾದ ಪ್ರದೇಶಗಳಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ದುರ್ಗಮ ಪ್ರದೇಶಗಳನ್ನು ತಲುಪಲು ಅಧಿಕಾರಿಗಳು ಹಗ್ಗಗಳನ್ನು ಬಳಸುತ್ತಿದ್ದಾರೆ. ರಾತ್ರಿಯ ಕಾರ್ಯಾಚರಣೆಯ ಸಮಯದಲ್ಲಿ ಡ್ರೋನ್ ಕಣ್ಗಾವಲನ್ನು ಸಹ ನಿಯೋಜಿಸಲಾಗಿದೆ. ಆದರೂ, ಬಾಲಕಿ ಇದುವರೆಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಕೇರಳದ ಪೊಲೀಸ್ ಅಧಿಕಾರಿಯೊಬ್ಬರು ತನಿಖೆಗೆ ಸಹಾಯ ಮಾಡುತ್ತಿದ್ದಾರೆ. ಬೆಟ್ಟದಲ್ಲಿ ತನ್ನ ಕುಟುಂಬದ ಸದಸ್ಯರೊಬ್ಬರ ಜೊತೆಗಿದ್ದ ವಿಡಿಯೋದಲ್ಲಿ ಬಾಲಕಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಕದನ ವಿರಾಮ ಘೋಷಿಸಿದ್ದರೂ, ಹಾರ್ಮುಜ್ ‘ಸುಂಕ’ ಮುಂದುವರಿಯಲಿವೆ!

ಇತ್ತೀಚೆಗಷ್ಟೇ ಇದೇ ಕೇರಳದ ಯುವತಿ ಜಿ.ಎಸ್. ಶರಣ್ಯಾ ಎಂಬುವವರು ಕೊಡಗಿನ ತಡಿಯಾಂಡಮೊಲ್ ಬೆಟ್ಟಕ್ಕೆ ಚಾರಣ ಹೋಗಿದ್ದರು. ಅವರು ಬೆಟ್ಟ ಇಳಿಯುವಾಗ ತಮ್ಮ ಗುಂಪಿನಿಂದ ಬೇರ್ಪಟ್ಟು ದಾರಿ ತಪ್ಪಿದ್ದರು. ದಟ್ಟ ಅರಣ್ಯದಲ್ಲಿ ಸಿಲುಕಿಕೊಂಡ ಅವರು, ಕೇವಲ ನೀರನ್ನು ಕುಡಿದು ನಾಲ್ಕು ದಿನಗಳ ಕಾಲ ಬದುಕುಳಿದಿದ್ದರು. ನಂತರ ಅವರನ್ನು ಪತ್ತೆಹಚ್ಚಿ ರಕ್ಷಿಸಲಾಯಿತು. ಇದೀಗ, ಅಂತಹದ್ದೇ ಮತ್ತೊಂದು ನಾಪತ್ತೆ ಪ್ರಕರಣ ಘಟಿಸಿದೆ.

ಸತತವಾಗಿ ಇಂತಹ ಘಟನೆಗಳು ನಡೆಯುತ್ತಿರುವುದರಿಂದ, ಕರ್ನಾಟಕ ಸರ್ಕಾರವು ಚಾರಣ ಚಟುವಟಿಕೆಗಳಿಗಾಗಿ ಕಡ್ಡಾಯ ‘ಪ್ರಮಾಣಿತ ಕಾರ್ಯಾಚರಣೆ ವಿಧಾನ’ (SOP) ಜಾರಿಗೆ ತರಲು ನಿರ್ಧರಿಸಿದೆ. ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಸಲಾಗುವ ಇ-ಪ್ಯಾಟ್ರೋಲ್ ಮತ್ತು M-STEPS ಅಪ್ಲಿಕೇಶನ್‌ಗಳ ಮಾದರಿಯಲ್ಲೇ ಚಾರಣಿಗರಿಗಾಗಿ ‘ಇ-ಟ್ರ್ಯಾಕಿಂಗ್ ವ್ಯವಸ್ಥೆ’ಯನ್ನು ಪರಿಚಯಿಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ. ಈ ವ್ಯವಸ್ಥೆಯಡಿ, ಚಾರಣದ ಅವಧಿಯಲ್ಲಿ ಚಾರಣಿಗರ ಮೊಬೈಲ್ ಫೋನ್‌ಗಳಲ್ಲಿ ತಾತ್ಕಾಲಿಕ ಟ್ರ್ಯಾಕಿಂಗ್ ಆ್ಯಪ್ ಅಳವಡಿಸಲಾಗುತ್ತದೆ, ಇದರಿಂದ ಯಾರಾದರೂ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಪತ್ತೆಹಚ್ಚಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...