ಚಿಕ್ಕಮಗಳೂರು | ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ನಾಪತ್ತೆ

Date:

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

- Advertisement -

ನಾಪತ್ತೆಯಾದ ಬಾಲಕಿ ಶ್ರೀನಂದನ ಮೂಲತಃ ಕೇರಳದ ಪಾಲಕ್ಕಾಡ್ ನಿವಾಸಿ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ಪ್ರವಾಸಿ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದಾಳೆ. ಏಪ್ರಿಲ್ 7ರ ಮಂಗಳವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದು ಬಂದಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು. ಬಾಲಕಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾಡಳಿತ, ತಡರಾತ್ರಿವರೆಗೂ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಿಬ್ಬಂದಿಗಳು ವಾಪಸ್ಸಾಗಿದ್ದರು. 

ಇದನ್ನು ಓದಿದ್ದೀರಾ?ಚಿಕ್ಕಮಗಳೂರು | ಹಾವು ಕಚ್ಚಿ ಕಾರ್ಮಿಕ ಮಹಿಳೆ ಸಾವು 

ಬುಧವಾರ ಮುಂಜಾನೆಯಿಂದಲೇ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಜಾಲಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾಗಿರುವುದರಿಂದ ಬಾಲಕಿಯನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶೋಧ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಹಕಾರಿ ಸಂಘಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು: ಎಚ್.ಡಿ.ಕುಮಾರಸ್ವಾಮಿ

ಸಹಕಾರಿ ಸಂಘಗಳು ರೈತರ ಆರ್ಥಿಕ ಭದ್ರತೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರಮುಖ...

ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕುಂಬಾರಗಡಿಗೆ...

ಬೈಲಹೊಂಗಲ |ಕೆಆರ್‌ಡಿಸಿಎಲ್ ಅಧ್ಯಕ್ಷರಾಗಿ ಶಾಸಕ ಮಹಾಂತೇಶ ಕೌಜಲಗಿ ನೇಮಕ

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧ್ಯಕ್ಷರಾಗಿ ಬೈಲಹೊಂಗಲ ಶಾಸಕ...