ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

Date:

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿಕ್ಕಮಗಳೂರು, ಕಾನೂನು ಸೇವಾ ಸಮಿತಿ ಮೂಡಿಗೆರೆ, ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಯಿತು. 

- Advertisement -

ಮಕ್ಕಳ ಮೇಲೆ ಲೈಂಗಿಕ ಅತ್ಯಾಚಾರ, ದೌರ್ಜನ್ಯ ಹೆಚ್ಚಾಗುತ್ತಿದ್ದೆ. ಇದನ್ನೂ ನಾವೆಲ್ಲರೂ ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅಶ್ಲೀಲತೆಯಂತಹ ಚಿತ್ರಣಗಳು ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಅಪರಾಧಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿದ ತಕ್ಷಣ ಪೊಲೀಸರಿಗೆ ಅಥವಾ ವಿಶೇಷ ಬಾಲ್ಯ ಪೊಲೀಸ್ ಘಟಕಕ್ಕೆ ವರದಿ ಮಾಡುವುದು ಕಡ್ಡಾಯವಾಗಿರುತ್ತದೆ. ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿದರೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕ್ರಮ ಕೈಗೊಳ್ಳುತ್ತಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...
Screenshot 2026 09 12 13 29 01 41 7352322957d4404136654ef4adb64504

ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರಲ್ಲಿ ಜಾರಿ ಮಾಡಿತು. ಹುಡುಗರಿಗೆ 21ವರ್ಷ ಹಾಗೂ ಹುಡುಗಿಯರಿಗೆ 18 ವರ್ಷ ತುಂಬಿರಬೇಕು. ಈ ವಯಸ್ಸಿಕಿಂತ ಕಡಿಮೆ ಇರುವವರನ್ನು ಮದುವೆ ಮಾಡುವುದು ಕಾನೂನು ಪ್ರಕಾರ ಅಪರಾಧ ಎಂದು ಪರಿಗಣಿಸಲಾಗಿದೆ. ಈ ಪ್ರಕರಣಕ್ಕೆ  ಜಾಮೀನು ರಹಿತ ಹಾಗೂ ವಿಚಾರಣಾರ್ಹ ಅಪರಾಧವಾಗಿ ಪರಿಗಣಿಸಿ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ನ್ಯಾಯಧೀಶರಾದ ವಿ.ಹನುಮಂತಪ್ಪನವರು ತಿಳಿಸಿದರು.

Screenshot 2026 09 12 13 38 04 99 7352322957d4404136654ef4adb64504

ಈಗಿನ ಮಕ್ಕಳು ನಾಳೆಯ ಪ್ರಜೆಗಳು, ನಾವು ಕಲಿಕೆಯಲ್ಲಿ ಮುಂದುವರಿಯಬೇಕು. ಮಕ್ಕಳಿಗೆ ಬೇಕಾಗುವ ಸೌಕರ್ಯಗಳನ್ನು ಸರ್ಕಾರ ನೀಡುತ್ತಿದೆ. ಅದನ್ನ ಸದುಪಯೋಗ ಪಡಿಸಿಕೊಳ್ಳಬೇಕು. ಚಲನ ಚಿತ್ರಗಳಲ್ಲಿ ಹೀರೋಗಳನ್ನಲ್ಲ ಮಕ್ಕಳು ನಂಬಬೇಕಾಗಿರುವುದು ನಿಮ್ಮ ತಂದೆ, ತಾಯಿ, ಗುರುಗಳಾಗಿರುತ್ತಾರೆ.  ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಸಾಲುಮರದ ತಿಮ್ಮಕ್ಕ ಸಾವಿರಾರು ಮರಗಳನ್ನು ನೆಟ್ಟು ಪರಿಸರಕ್ಕೆ ದಾರಿ ದೀಪವಾಗಿದ್ದಾರೆ ಎಂದು ನ್ಯಾ. ವಿ.ಹನುಮಂತಪ್ಪನವರು ತಿಳಿಸಿದರು.

Screenshot 2026 09 12 13 29 33 72 99c04817c0de5652397fc8b56c3b3817

ಸರ್ಕಾರಿ ಶಾಲೆಯ ಶಿಕ್ಷಕರು ಉತ್ತಮ ಶಿಕ್ಷಕರಾಗಿರುತ್ತಾರೆ.  ಶಿಕ್ಷಕರನ್ನು ಶತ್ರುವಂತೆ , ಶಿಕ್ಷಣವನ್ನು ಶಿಕ್ಷೆಯಂತೆ ಮಕ್ಕಳಿಗೆ ಮಾಡುತ್ತಿರುವುದು ದುರಂತ ಎಂದು ಅವರು ಹೇಳಿದರು. ಎಲ್ಲ ವಿದ್ಯಾರ್ಥಿಗಳು ಈ ದೇಶದ ರಾಷ್ಟ್ರಪತಿಯಂತೆ  ಮೌಲ್ಯಯುತ್ತ ಶಿಕ್ಷಣದಲ್ಲಿ ಪ್ರಗತಿಯಾಗಬೇಕು. ಅಲ್ಲದೇ ಪೋಷಕರು ಮಕ್ಕಳಲ್ಲಿ ಇರುವ ಆಸಕ್ತಿ ಅನುಸಾರ ಬದುಕು ಕಟ್ಟಿಕೊಳ್ಳುವ ಸ್ವಾತಂತ್ರ್ಯ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು, ಮೌಲ್ಯಯುತ ಶಿಕ್ಷಣ ನೀಡುತ್ತಿದ್ದರೂ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಪಿಯುಸಿ ವರೆಗೂ ಉಚಿತ ಶಿಕ್ಷಣ ನೀಡುತ್ತಿದ್ದರೂ ಖಾಸಗಿ ಶಾಲೆಗಳತ್ತ ವ್ಯಾಮೋಹವಾಗಿದೆ. ಎಂದು ಪ್ರಧಾನ ಸಿವಿಲ್ ನ್ಯಾ, ಯೋಗೇಶ್ ಎಂ.ಆರ್ ತಿಳಿಸಿದರು. 

ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದಕ್ಕೆ ಯಾವುದೇ ಮುಜುಗರ ಪಡಬೇಕಿಲ್ಲ, ಸರ್ಕಾರದಿಂದ ಮಕ್ಕಳಿಗೆ ಬೇಕಾಗುವ ಎಲ್ಲಾ ಸೌಲಭ್ಯ ಕಲ್ಪಿಸಿದೆ ಅದನ್ನ ಪ್ರತಿಯೊಬ್ಬರು ಉಪಯೋಗಿಸಿಕೊಳ್ಳಬೇಕು. ಸರ್ಕಾರಿ ಶಾಲೆಯನ್ನು ನಾವೆಲ್ಲರೂ ಉಳಿಸಬೇಕು ಎಂದು ವಕೀಲರ ಸಂಘದ ಅಧ್ಯಕ ರಘು ತಿಳಿಸಿದರು.

Screenshot 2026 09 12 13 36 13 17 99c04817c0de5652397fc8b56c3b3817

ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು, ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸುವುದು. 2029ರ ವೇಳೆಗೆ ಸಂಪೂರ್ಣ ಭಾರತವನ್ನು ಮಾದಕ ದ್ರವ್ಯ ಮುಕ್ತವನ್ನಾಗಿ ಮಾಡಬೇಕಾಗಿದೆ. ಮಕ್ಕಳು ಸುಳ್ಳು ಹೇಳಬಾರದು, ಬೇರೆಯವರಿಂದ ಚಾಕಲೇಟ್ ಕೊಟ್ಟರೆ ತೆಗೆದುಕೊಳ್ಳಬಾರದು. ಮಧ್ಯಪಾನ ಮತ್ತು ಧೂಮಪಾನವನ್ನು ಅಂಗಡಿಯಿಂದ ತೆಗೆದುಕೊಂಡು ಬರಬಾರದು. ಡ್ರಾಗ್ಸ್, ಕುಡಿತಕ್ಕೆ ಒಳಗಾಗಿರುವವರಿಗೆ ಸೇವಿಸಬಾರದು ಎಂದು ತಿಳಿಸಬೇಕು. ಮಕ್ಕಳು ದುಶ್ಚಟಗಳಿಂದ ದೂರವಿರಬೇಕು ಎಂದು ಯುವ ವಕೀಲ ಉದಯ್ ಪ್ರಸಾದ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಕಸ್ತೂರಿರಂಗನ್ ವರದಿ: ಈ ಭಾಗದವರಗಿದ್ದರೆ ಮಲೆನಾಡಿನ ಪ್ರಾಂತ್ಯದ ಜನರ ನೋವು ಅರ್ಥವಾಗುತ್ತಿತ್ತು; ರಂಭಾಪುರಿ ಮಠದ ಸ್ವಾಮೀಜಿ

ಈ ವೇಳೆ ಉದ್ಘಾಟಕರಾಗಿ ವಿ. ಹನುಮಂತಪ್ಪ, ಅಧ್ಯಕ್ಷತೆ ಜಿ. ಹೆಚ್ ಶ್ರೀನಿವಾಸ್, ಗೌರನ್ವಿತ ಮುಖ್ಯ ಅತಿಥಿಗಳಾಗಿ ಶ್ರೀ ಯೋಗೇಶ್ ಎಂ. ಆರ್, ಹೆಚ್.ಕೆ ರಘು, ಗೌಸ್ ಮೋಹಿಯುದ್ದಿನ್, ಮಧುಕುಮಾರ್, ಮಂಜುಳ, ಉದಯ್ ಪ್ರಸಾದ್ ಎನ್. ಜೆ, ಶಾಲೆಯ ಶಿಕ್ಷಕರು, ಮಕ್ಕಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು. 

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...