ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪಟ್ಟಣಿಗೆರೆ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕಡೂರು ನ್ಯಾಯಾಲಯದ ಮಾನ್ಯ ನ್ಯಾಯಾಧೀಶರು ವಿದ್ಯಾರ್ಥಿಗಳಿಗೆ ಮುಖ್ಯ ಕಾನೂನು ಸಲಹೆಗಳನ್ನು ನೀಡಿ.ದರು. ಸೈಬರ್ ಭದ್ರತೆ ಬಗ್ಗೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಲು ಸೂಚಿಸಿದರು. ಮಕ್ಕಳ ಹಕ್ಕುಗಳು ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ (POCSO) ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.
ಹಾಗೆಯೇ, ಸಂಚಾರ ನಿಯಮ ಪರವಾನಗಿ ಇಲ್ಲದೆ ವಾಹನ ಚಲಾಯಿಸದಂತೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಿದರು. ಅನ್ಯಾಯ ಅಥವಾ ಶೋಷಣೆ ನಡೆದಾಗ ಭಯಪಡದೆ ಕಾನೂನಿನ ನೆರವು ಪಡೆಯುವಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಈ ವೇಳೆ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.





