ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

Date:

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗದ ರೈತರ ಪಾಲಿಗೆ ಸಂಜೀವಿನಿಯಾಗಬಹುದಾದ ಬಹುಪಯೋಗಿ ‘ಮಳಲೂರು ಏತ ನೀರಾವರಿ ಯೋಜನೆ’ಯನ್ನು ಹೆಸರಿಗಷ್ಟೇ ಯೋಜನೆ ಮಾಡಲಾಗಿದೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

- Advertisement -
Screenshot 2026 09 24 20 49 26 02 99c04817c0de5652397fc8b56c3b3817

ಸುಮಾರು 25 ರಿಂದ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಯೋಜನೆಗೆ ಇದುವರೆಗೆ 25 ರಿಂದ 30 ಕೋಟಿ ರೂಪಾಯಿ ಖರ್ಚಾಗಿದ್ದರೂ ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ. ಈಗಾಗಲೇ ಯೋಜನೆಯ ಶೇಕಡಾ 90 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಪ್ರಸ್ತುತ ಕಾಮಗಾರಿ ಮುಕ್ತಾಯಗೊಳಿಸಲು ಸರ್ಕಾರ ಮತ್ತೆ 21 ಕೋಟಿ ರೂಪಾಯಿ ಮೀಸಲಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...
Screenshot 2026 09 24 20 50 25 57 99c04817c0de5652397fc8b56c3b3817

ಈ ಯೋಜನೆಯಡಿ ಯಗಚಿ ಜಲಾಶಯಕ್ಕೆ ಸೇರುವ ನೀರನ್ನು ಕಾಲುವೆಯ ಮೂಲಕ ನೀರೆತ್ತುವ (ಲಿಫ್ಟ್) ಮುಖಾಂತರ ಬೃಹತ್ ನೀರಿನ ಟ್ಯಾಂಕ್‌ಗೆ ತುಂಬಿಸಲಾಗುತ್ತದೆ. ಅಲ್ಲಿಂದ ಕಾಲುವೆಗಳ ಮೂಲಕ ಕಂಬಿಹಳ್ಳಿ, ತಗಡೂರು ಹಾಗೂ ಬಿಗ್ಗನಹಳ್ಳಿಗೆ ನೀರು ಹರಿಯಲಿದೆ. ಇದರಿಂದ ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಅಂಬಳೆ ಹೋಬಳಿಯ 25ಕ್ಕೂ ಹೆಚ್ಚು ಹಳ್ಳಿಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರು ಸಿಗುವುದರ ಜೊತೆಗೆ ಕೃಷಿ ಭೂಮಿಗೂ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ರೈತ ಮುಖಂಡ ಸ್ವಾಮಿ ಈದಿನ. ಕಾಮ್ ಗೆ ತಿಳಿಸಿದರು.

Screenshot 2026 09 24 20 50 09 11 99c04817c0de5652397fc8b56c3b3817

ಬೆಳಗ್ಗೆಯಿಂದ ಕಲ್ನಾಡಿಗೆ ಮುಗಿಸಿ ಅಝದ್ ಪಾರ್ಕ್ ಬಳಿ ಬಂದು ಬೃಹತ್ ಸಂಖ್ಯೆಯಲ್ಲಿ ರೈತರು 21 ಗ್ರಾಮಗಳಿಂದ ನೆರದಿದ್ದರು. ಮಧ್ಯಾಹ್ನದಿಂದ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದಿಲ್ಲ ಬಂದ ರೈತರ ಮನವಿ ಪಡೆಯುತ್ತಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದರು. ಮೊನ್ನೆ ಕಸ್ತೂರಿ ರಂಗನ್ ವರದಿ ಕುರಿತು ಸ್ವತಃ ರಾಜ್ಯದ ಮುಖ್ಯಮಂತ್ರಿ ಬಂದಿದ್ದರು ಇಲ್ಲಿ ಜಿಲ್ಲಾಧಿಕಾರಿ ಬರುವುದಕ್ಕೆ ಅಡೆತಡೆಯಗಿದೆಯೇ ಎಂದು ರೈತರು ಆರೋಪಿಸಿದರು.

ಈ ಯೋಜನೆಯನ್ನು ತಕ್ಷಣವೇ ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿ ಶುಕ್ರವಾರ ರೈತರು ಬೃಹತ್ ಪಾದಯಾತ್ರೆ ನಡೆಸಿದರು. ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿ, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿದ್ದೀರಾ?ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಕಳೆದ 3 ದಶಕಗಳಿಂದ ಈ ಯೋಜನೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ರೈತರು, ಇಂದು ಸುಮಾರು 12 ಕಿ.ಮೀ. ಸುದೀರ್ಘ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ವರ್ಷಗಳಿಂದ ನಂಜಾಗುತ್ತಿರುವ ರೈತರ ಬದುಕನ್ನು ಹಸನು ಮಾಡಲು ಈ ಯೋಜನೆಯನ್ನು ತಕ್ಷಣವೇ ಚಾಲನೆಗೆ ತರಬೇಕು ಎಂದು ಹೋರಾಟಗಾರರು ಅಗ್ರಹಿಸಿದ್ದಾರೆ. ಈ ಯೋಜನೆ ಕುರಿತು ಆದಷ್ಟು ಬೇಗ ಸಮಸ್ಯೆಯನ್ನು ರಾಜ್ಯ ಸರ್ಕಾರ ಬಗೆ ಹರಿಸಬೇಕಾಗಿದೆ. 

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...