ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ವಲಯಕ್ಕೆ ಹೊಂದಿಕೊಂಡಿರುವ ವೆಂಕಟೇಶ್ ಎಂಬುವರ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯೊಂದರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಭಾಗವು ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹತ್ತಿರದಲ್ಲಿ ಇರುವುದರಿಂದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಸಾವಿಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ನಾಳೆ ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಆ ವರದಿ ಬಂದ ಬಳಿಕವಷ್ಟೇ ಸಾವಿನ ನಿಜವಾದ ಕಾರಣ ಏನೆಂಬುದು ಸ್ಪಷ್ಟವಾಗಲಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | 8ಲಕ್ಷ ಸಾಲಕ್ಕೆ 15000ರೂ. ಗೆ ಇತ್ಯರ್ಥಪಡಿಸಿದ ನ್ಯಾಯಾಲಯ
ಈ ಘಟನೆಯ ಬೆನ್ನಲ್ಲೇ ಪರಿಸರವಾದಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಹುಲಿಯ ಸಾವಿಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.




