ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

Date:

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು 4 ವರ್ಷದ ಸುಮಾರು 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ಕಡಿದು ಹಾಕಿರುವ ಅಮಾನವೀಯ ಘಟನೆ ನಡೆದಿದೆ.

- Advertisement -

ಕರಕುಚ್ಚಿ ಗ್ರಾಮದ ನಿವಾಸಿ ಸಣ್ಣಪ್ಪ ಎಂಬವರು ತಮ್ಮ ಮುಕ್ಕಾಲು ಎಕರೆ ಜಮೀನಿನಲ್ಲಿ ಈ ಅಡಿಕೆ ಗಿಡಗಳನ್ನು ಬೆಳೆಸಿದ್ದರು. ಕಳೆದ 4 ವರ್ಷಗಳಿಂದ ಅಪಾರ ಶ್ರಮ ಮತ್ತು ಖರ್ಚು ಮಾಡಿ ಗಿಡಗಳನ್ನು ಪೋಷಿಸಲಾಗಿದ್ದು, ಮುಂದಿನ ವರ್ಷದಿಂದ ಅವು ಉತ್ತಮ ಫಸಲು ನೀಡುವ ನಿರೀಕ್ಷೆಯಲ್ಲಿದ್ದರು. ಆದರೆ, ಕತ್ತಲಲ್ಲಿ ತೋಟಕ್ಕೆ ನುಗ್ಗಿದ ಕಿಡಿಗೇಡಿಗಳು 150ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಬುಡಸಮೇತ ಕಡಿದು ನೆಲಕ್ಕುರುಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೆಳಿಗ್ಗೆ ತೋಟಕ್ಕೆ ತೆರಳಿದಾಗ ಗಿಡಗಳು ನೆಲಕ್ಕುರುಳಿರುವುದು ಕಂಡುಬಂದಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ರೈತ ಸಣ್ಣಪ್ಪ ಕಣ್ಣೀರಿಟ್ಟಿದ್ದಾರೆ. ವೈಯಕ್ತಿಕ ದ್ವೇಷದ ಕಾರಣಕ್ಕಾಗಿಯೇ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಪ್ರಕರಣ ದಾಖಲು 

ಈ ಕುರಿತು ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ ಚುನಾವಣೆ; ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಪ್ರಕ್ರಿಯೇ ಬೆಳೆಗ್ಗೆ 8 ಗಂಟೆಯಿಂದ...

SIR ವೆಚ್ಚದ ಶ್ವೇತಪತ್ರ ಬಿಡುಗಡೆಗೆ ಜಾಗೃತ ಕರ್ನಾಟಕ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ ಕರ್ನಾಟಕದ ವಿವಿಧೆಡೆ...

ಉಡುಪಿಯಲ್ಲಿ ಅ.25ರಂದು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 5ನೇ ಶಾಖೆ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ...

ಗದಗ | ವೈಚಾರಿಕ ತಳಹದಿಯ ಚರ್ಚೆಗೆ ಸದಾ ಸ್ವಾಗತವಿದೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ...