ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು ವಾರದಲ್ಲಿ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲೆಯ ಪ್ರಮುಖ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಎದುರಾಗಿರುವ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ಶೀಘ್ರವೇ ಬಗೆಹರಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕುಸುಮ್ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಗೆ ಮಂಜೂರಾಗಿರುವ ಒಂಬತ್ತು ಘಟಕಗಳಿಗೆ ಸಂಬಂಧಿಸಿದಂತೆ ಭೂಸ್ವಾಧೀನ ವಿಳಂಬವಾಗುತ್ತಿರುವುದರಿಂದ ಅನುದಾನ ವಾಪಸ್ ಹೋಗುವ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಯೋಜನೆಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಮುಕ್ತ ಚರ್ಚೆ ನಡೆಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ; ಶಾಸಕಿ ನಯನ ಮೋಟಮ್ಮ
ಎಲ್ಲಾ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.





