ಚಿಕ್ಕಮಗಳೂರು ನಗರದ ಅಝದ್ ಪಾರ್ಕ್ ಬಳಿ ಬುಧವಾರದಂದು ಸಮಾನ ಮನಸ್ಕರು ಹಾಗೂ ಪ್ರಗತಿಪರ ಸಂಘಟನೆ ಒಕ್ಕೂಟದ ವತಿಯಿಂದ, ‘ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಂಪೂರ್ಣ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಚಳುವಳಿನಿರತ ವಿದ್ಯಾರ್ಥಿಗಳನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿರಿಯ ಹೋರಾಟಗಾರ ಸೋನಮ್ ವಾಂಗ್ಟುಕ್ ಅವರನ್ನು ಬಂಧಿಸಿರುವ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡುಕೋಣ ದಾಳಿ; ಸ್ಥಳದಲ್ಲೆ ವ್ಯಕ್ತಿ ಸಾವು
ಕೇಂದ್ರ ಸರ್ಕಾರದ ವಿಫಲ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರ, ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಸಂಪೂರ್ಣವಾಗಿ ಸೋತಿದೆ. ವಿದ್ಯಾರ್ಥಿಗಳ ನ್ಯಾಯಯುತ ಹಕ್ಕುಗಳಿಗಾಗಿ ಧ್ವನಿ ಎತ್ತಿದ ಹಿರಿಯ ಸಮಾಜ ಸೇವಕ ಸೋನಮ್ ವಾಂಗ್ಟುಕ್ ಅವರನ್ನು ಅಕ್ರಮವಾಗಿ ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದ್ದು ಕೇಂದ್ರ ಸರ್ಕಾರ ಕೂಡಲೇ ಸೋನಮ್ ವಾಂಗ್ಟುಕ್ ಅವರನ್ನು ಬಿಡುಗಡೆ ಮಾಡಬೇಕು ಮತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಕರಾರು ಆಗ್ರಹಿಸಿದರು.





