ಶ್ರೀರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಜನರ ಉದ್ದಾರಕ್ಕಿಂತಲೂ ಆಯೋಧ್ಯೆ ಶ್ರೀರಾಮನ ಟ್ರಸ್ಟ್‌ನ ಹೆಸರಿನಲ್ಲಿ ಲೂಟಿ ಮಾಡಿದ್ದೇ ಸಾಧನೆ. ಶ್ರೀರಾಮನ ಹೆಸರಿನಲ್ಲಿ ಕೋಟ್ಯಾಂತರ ರೂ. ಲೂಟಿಯಾಗಿದ್ದರೂ ಕೂಡ ಇದುವರೆಗೂ ಪ್ರಧಾನಿ ನರೇಂದ್ರ ಮೋದಿಯವರು ಮೌನವಹಿಸಿದ್ದಾರೆ. ನೀಟ್ ಹಗರಣ ಕುರಿತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಚಾರ ಸಮಿತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.
ಭೂಮಿ ಪೂಜೆಯಿಂದ ಮಂದಿರ ನಾವುಗಳು ಭ್ರಷ್ಟಾಚಾರಿಗಳ ವಿರೋಧಿಗಳು ಎನ್ನುವ ಇವರು ಶ್ರೀರಾಮನ ಹೆಸರಿನಲ್ಲಿ ಲೂಟಿ ಹೊಡೆದ ಭ್ರಷ್ಟಾಚಾರವನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ ಉದ್ಘಾಟನೆವರೆಗಿನ ಪ್ರತಿಯೊಂದು ಧಾರ್ಮಿಕ ಆಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರೆ, ಪ್ರಚಾರಕ್ಕಾಗಿ ನೆರವೇರಿಸಿದ್ದರು.
ಟ್ರಸ್ಟ್‌ನ ಪ್ರಮುಖರು ನೀಡಿದ ರಾಜೀನಾಮೆ ಅಂಗೀಕಾರವಾಗಿಲ್ಲ. ಎಸ್‌ಐಟಿ ತನಿಖಾ ವರದಿಯಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳನ್ನು ಬಿಟ್ಟು ಕಾರು ಚಾಲಕ, ಸೆಕ್ಯೂರಿಟಿ ಗಾರ್ಡ್, ಹುಂಡಿ ಏಣಿಕೆ ಮಾಡುವಂತ ಆರು ಜನರನ್ನು ಮಾತ್ರ ಸೇರಿಸಲಾಗಿದೆ. ತನಿಖಾ ವರದಿಯು ಪಾರದರ್ಶಕವಾಗಿಲ್ಲ. ಆದ್ದರಿಂದ ಈ ಪ್ರಕರಣದ ಬಗ್ಗೆ ಎಸ್‌ಐಟಿಯ ತನಿಖಾ ವರದಿಯನ್ನು ಕೂಡಲೇ ಬಹಿರಂಗಪಡಿಸಬೇಕು. ಹಾಗೂ ರಾಮ ಮಂದಿರದ ಹುಂಡಿ ಹಗರಣವನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಪಾರದರ್ಶಕವಾಗಿ ತನಿಖೆಗೆ ಒಳಪಡಿಸುವಂತೆ ಒತ್ತಾಯಸುತ್ತೇವೆ ಎಂದು ಪ್ರಚಾರ ಸಮಿತಿ ವಕ್ತರರಾದ ಮಹೇಶ್ವರಪ್ಪ ತಿಳಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ 2014 ರಿಂದ 2026 ರವರೆಗೆ ಅಧಿಕಾರಕ್ಕೇ ಬಂದಾಗಿನಿಂದಲೂ ಇದುವರೆಗೂ ಸುಮಾರು 152 ಬಾರಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಆದರೆ ಇದುವರೆಗೂ ಇದರ ಜವಾಬ್ದಾರಿ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅಧಿಕಾರಕ್ಕೆ ಅಂಟಿಕೊಂಡು ರಾಜೀನಾಮೆ ನೀಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿರುವ ಕೇಂದ್ರ ಬಿಜೆಪಿ ಸರ್ಕಾರ ಅನೇಕ ವಿದ್ಯಾರ್ಥಿಗಳ ಪ್ರಾಣವನ್ನೇ ತೆಗೆದುಕೊಂಡಿದೆ. ಆದ್ದರಿಂದ ಕೇಂದ್ರ ಬಿಜೆಪಿ ಸರ್ಕಾರವನ್ನು ವಿದ್ಯಾರ್ಥಿಗಳ ಬಲಿ ಪಡೆದ ಬಿಜೆಪಿ ಕೇಂದ್ರ ಸರ್ಕಾರ ಎಂದು ಕರೆಯಬೇಕಾಗುತ್ತದೆ. ಕೂಡಲೇ ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು. ಒಂದು ವೇಳೆ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡದಿದ್ದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಿರಂತರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಮುಖಂಡ ಸೈಯದ್ ಹನೀಫ್ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹಿಂಬಾಕಿ ಪಿಂಚಣಿಯನ್ನು ತಕ್ಷಣ ಬಿಡುಗಡೆ ಮಾಡಬೇಕು; ರೈತ ಸಂಘ
ಈ ವೇಳೆ ಮಹೇಶ್ವರಪ್ಪ, ಗಂಗಾಧರ ಹೆಚ್.ಸಿ, ಸೈಯದ್ ಹನೀಫ್ ಹಾಗೂ ಇನ್ನಿತರರಿದ್ದರು.





