ಚಿಕ್ಕಮಗಳೂರು | ಶಾಲಾ ಮಕ್ಕಳಿದ್ದ ಓಮಿನಿ ಕಾರು ಪಲ್ಟಿ; ತಪ್ಪಿದ ಅನಾಹುತ; ಪೋಷಕರ ಆಕ್ರೋಶ 

Date:

ಚಿಕ್ಕಮಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ಅಜಾಗರೂಕ ಚಾಲನೆಯಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಸಮೀಪ ಸಂಭವಿಸಿದೆ.

- Advertisement -
Screenshot 2026 06 09 15 37 10 56 7352322957d4404136654ef4adb64504

ಮಾಹಿತಿಯ ಪ್ರಕಾರ, ಕೂದುವಳ್ಳಿಯ ‘ಲಿಟಲ್ ಫ್ಲವರ್’ ಪ್ಲೇ ಹೋಮ್‌ಗೆ ಸೇರಿದ ಓಮಿನಿ ಕಾರು ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ವೇಳೆ ಅಪಘಾತಕ್ಕೀಡಾಗಿದೆ. ಘಟನೆಯ ವೇಳೆ ವಾಹನದಲ್ಲಿ 12 ಮಕ್ಕಳು ಇದ್ದರು ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ಧಾವಿಸಿ ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದೇ ವೇಳೆ, ಮಕ್ಕಳನ್ನು ಕರೆದೊಯ್ಯಲು ಕಡ್ಡಾಯವಾಗಿ ವಾಣಿಜ್ಯ (ಕಮರ್ಷಿಯಲ್) ವಾಹನ ಬಳಸಬೇಕಾದ ನಿಯಮವಿದ್ದರೂ, ಹಲವು ವರ್ಷಗಳಿಂದ ಖಾಸಗಿ ನೋಂದಣಿಯ (ವೈಟ್ ಬೋರ್ಡ್) ವಾಹನವನ್ನು ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಗೆ ಪೂರ್ಣ ಪ್ರಮಾಣದ ಚಾಲನಾ ಪರವಾನಗಿ ಇರಲಿಲ್ಲ, ಕೇವಲ ಲರ್ನರ್ಸ್ ಲೈಸೆನ್ಸ್ (LLR) ಹೊಂದಿದ್ದ ಎನ್ನುವ ಮಾಹಿತಿ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರವಾಗಿ ಆರೋಪಿಸಿದ್ದಾರೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ವಾಹನದ ವಿಮೆ (ಇನ್ಸೂರೆನ್ಸ್) ಅವಧಿ ಮುಗಿದಿರುವುದಾಗಿ ತಿಳಿದುಬಂದಿದ್ದು, ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಿಜೆಪಿ ಮುಖಂಡನಿಂದ ಯುವಕನ ಮೇಲೆ ಗಂಭೀರ ಹಲ್ಲೆ 

ಘಟನೆಯ ಹಿನ್ನೆಲೆಯಲ್ಲಿ ಪ್ಲೇ ಹೋಮ್ ಆಡಳಿತ ಮಂಡಳಿ ವಿರುದ್ಧ ಸೂಕ್ತ ತನಿಖೆ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಹೋರಾಟ ಮುಂದುವರಿಕೆ: ಯಾತ್ರಿ ಸಂಘ ನಿರ್ಧಾರ

ಉಡುಪಿ ರೈಲ್ವೆ ಯಾತ್ರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ...

ಚಿಕ್ಕಮಗಳೂರು | ಮಾ. ಶಾಸಕ ಎಂ.ಪಿ. ಕುಮಾರಸ್ವಾಮಿ: ದಲಿತರ ಭೂ ಕಬಳಿಕೆ ಆರೋಪ 

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ...

ರಾಮನಗರ | ಡಾ. ಬಂಜಗೆರೆ ಜಯಪ್ರಕಾಶ್‌ ಅವರಿಗೆ ಪ್ರಶಸ್ತಿ ಗೌರವ: ‘ಜನಮುಖಿ ಜೆಪಿ’ ಕಾರ್ಯಕ್ರಮ ಸಫಲ

ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ (ಜೆ.ಪಿ) ಅವರಿಗೆ ಕರ್ನಾಟಕ ಸಾಹಿತ್ಯ...

ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಬೈಕ್...