ಚಿಕ್ಕಮಗಳೂರು | ಅರಣ್ಯ ಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ; ಹೆಚ್. ಡಿ ತಮ್ಮಯ್ಯ 

Date:

ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿಯ ಕುಮಾರಗಿರಿ ದೇವಾಲಯದ ಆವರಣದಲ್ಲಿ ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ, ಲಕ್ಯಾ, ಕಸಬಾ ಹಾಗೂ ಜಾಗರ ಹೋಬಳಿ ವ್ಯಾಪ್ತಿಯ ರೈತರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

- Advertisement -

ಅರಣ್ಯ ಹಾಗೂ ಕಂದಾಯ ಭೂಮಿ ಸಮಸ್ಯೆಯಿಂದ ರೈತರು ಎದುರಿಸುತ್ತಿರುವ ಖಾತೆ, ಪೋಡಿ ದುರಸ್ತಿ, ಜಮೀನು ಖರೀದಿ-ಮಾರಾಟ ಹಾಗೂ ಬ್ಯಾಂಕ್ ಸಾಲದ ತೊಡಕುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಕ್ಕಮಗಳೂರಿನಲ್ಲಿ ರೈತರ ಸಮಾವೇಶದಲ್ಲಿ ತಿಳಿಸಲಾಯಿತು. ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಯೋಜನೆಯ ವ್ಯಾಪ್ತಿಗೆ ಹಲವು ಗ್ರಾಮಗಳ ಸರ್ವೇ ನಂಬರ್‌ಗಳು ಸೇರ್ಪಡೆಯಾಗಿರುವುದರಿಂದ ರೈತರು ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಪೋಡಿ ದುರಸ್ತಿ, ಖಾತೆ ಬದಲಾವಣೆ, ಜಮೀನು ಮಾರಾಟ ಹಾಗೂ ಬ್ಯಾಂಕ್ ಸಾಲ ಪಡೆಯಲು ಆಗುತ್ತಿರುವ ತೊಂದರೆಗಳನ್ನು ಬಗೆಹರಿಸಬೇಕು ಎಂದು ರೈತರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

ಅರಣ್ಯ ಇತ್ಯರ್ಥ ಅಧಿಕಾರಿ ಸೆಕ್ಷನ್ 17ರ ಅಡಿಯಲ್ಲಿ ನೀಡಿರುವ ಆದೇಶಗಳಲ್ಲಿನ ಅರ್ಹ ಕಡತಗಳನ್ನು ಶೀಘ್ರ ಸರ್ಕಾರಕೆ, ಕಳುಹಿಸಬೇಕು. ಜಂಟಿ ಸರ್ವೆ ಪೂರ್ಣಗೊಂಡಿರುವ ಕಡತಗಳನ್ನು ಕೇಂದ್ರ ಸರ್ಕಾರಕ್ಕೆ ತಲುಪಿಸಬೇಕು. ಸರ್ವೆ ಬಾಕಿ ಇರುವ ಪ್ರದೇಶಗಳಲ್ಲಿ ಕೂಡಲೇ ಜಂಟಿ ಸರ್ವೆ ನಡೆಸಿ ರೈತರಿಗೆ ಹಕ್ಕುಪತ್ರ ನೀಡಬೇಕು ಎಂದು ಸಮಾವೇಶದಲ್ಲಿ ಒತ್ತಾಯಿಸಲಾಯಿತು.

ಈ ವೇಳೆ ಶಾಸಕ ಹೆಚ್. ಡಿ ತಮ್ಮಯ್ಯ ಮಾತನಾಡಿ,  “5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಬಡ ಸಾಗುವಳಿದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಕುರಿತು ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರ ಸ್ಪಷ್ಟ ಸೂಚನೆ ಇದೆ. ರಾಜ್ಯ ಸರ್ಕಾರ ಕಾಯ್ದಿಟ್ಟ ಅರಣ್ಯ ಹಾಗೂ ಡೀಮ್ಸ್ ಫಾರೆಸ್ಟ್ ಸಮಸ್ಯೆಗಳನ್ನು ಬಗೆಹರಿಸಲು ಎಸ್‌ಐಟಿ ತಂಡ ರಚಿಸಿದ್ದು, ಜಂಟಿ ಸರ್ವೆ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದೆ”

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಂತರದಿಂದ ಬಚಾವಾದ ಬೈಕ್ ಸವಾರ 

ಈ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆತರೆ ಸ್ಥಳೀಯವಾಗಿ ಸುಮಾರು 5ರಿಂದ 6 ಸಾವಿರ ರೈತರಿಗೆ ಹಾಗೂ ಜಿಲ್ಲೆಯಾದ್ಯಂತ 50ರಿಂದ 60 ಸಾವಿರ ಜನರಿಗೆ ನೇರ ಪ್ರಯೋಜನವಾಗಲಿದೆ ಎಂದು ನಾಗರಿಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ವಿಜಯಕುಮಾರ್ ಹೇಳಿದರು. ಒಟ್ಟಿನಲ್ಲಿ, ಅರಣ್ಯ-ಕಂದಾಯ ಭೂಮಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಡೆದ ಈ ಸಮಾವೇಶ ಮಹತ್ವ ಪಡೆದುಕೊಂಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ...

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...