ಚಿಕ್ಕಮಗಳೂರು | ಪೆಟ್ರೋಲ್ ಬಂಕ್ ಮಹಿಳಾ ಸಿಬ್ಬಂದಿಗೆ ಓರ್ವ ವ್ಯಕ್ತಿಯಿಂದ ಹಲ್ಲೆ 

Date:

ಪೆಟ್ರೋಲ್ ಬಂಕ್‌ನಲ್ಲಿ ಹಳೇ ಬಾಕಿ ಹಣ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪಟ್ಟಣದಲ್ಲಿ ನಡೆದಿದೆ.

- Advertisement -

ಆರು ತಿಂಗಳ ಹಿಂದೆ ಅರ್ಜುನ್ ಎಂಬುವವರು 38 ಲೀಟರ್ ಡೀಸೆಲ್ ಹಾಕಿಸಿಕೊಂಡಿದ್ದರು. ಅಂದು ಹತ್ತು ನಿಮಿಷದಲ್ಲಿ ಹಣ ತರುವುದಾಗಿ ಹೇಳಿ ಹೋಗಿದ್ದ ಅರ್ಜುನ್, ಇಷ್ಟು ದಿನಗಳಾದರೂ ಬರಬೇಕಿದ್ದ 3,500 ರೂಪಾಯಿ ಬಾಕಿ ಹಣವನ್ನು ನೀಡಿರಲಿಲ್ಲ. ಜೂನ್ 14 ರಂದು ಅದೇ ಬಂಕ್‌ಗೆ ಬಂದ ಅರ್ಜುನ್ ಡೀಸೆಲ್‌ ಹಾಕುವಂತೆ ಕೇಳಿದ್ದಾನೆ. ಈ ವೇಳೆ ಮಹಿಳಾ ಸಿಬ್ಬಂದಿ ಮೊದಲು ಹಳೇ ಬಾಕಿ ಹಣ ಕೊಡುವಂತೆ ಕೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಅರ್ಜುನ್, ಬೇರೆ ಬಂಕ್‌ನಲ್ಲಿ ಸಾಲ ಕೊಡುತ್ತಾರೆ, ನೀನು ಯಾಕೆ ಕೊಡಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಅಷ್ಟೇ ಅಲ್ಲದೆ, 30 ಲೀಟರ್ ಡೀಸೆಲ್ ಕೊಡದಿದ್ದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ, ಕರ್ತವ್ಯದಲ್ಲಿದ್ದ ಮಹಿಳೆಯ ಜಡೆ ಹಿಡಿದು ಎಳೆದಾಡಿ, ಆಕೆಯ ಮೊಬೈಲ್‌ ಕಿತ್ತು ಎಸೆದಿದ್ದಾನೆ. ತದನಂತರ ಜೋರಾಗಿ ತಳ್ಳಿದ ಪರಿಣಾಮ ತಲೆ ಕಂಬಕ್ಕೆ ತಾಗಿ ಹಣೆಗೆ ಗಾಯವಾಗಿದೆ ಎಂದು ಆಲ್ಲೂರು ಠಾಣೆಗೆ ಮಹಿಳೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಪ್ರಾಪ್ತ ಬಾಲಕಿಗೆ ಅಸಭ್ಯ ವರ್ತನೆ: ಆರೋಪಿ ಬಂಧನ 

ಈ ಘಟನೆಯ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಲಾಟೆ ನಡೆಯುತ್ತಿದ್ದಂತೆ ಸ್ಥಳೀಯರು ಮಹಿಳಾ ಸಿಬ್ಬಂದಿ ಅವರ ರಕ್ಷಣೆಗೆ ಧಾವಿಸಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆರೋಪಿ ಅರ್ಜುನ್ ವಿರುದ್ಧ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...