ಚಿಕ್ಕಮಗಳೂರು | ಪೊಲೀಸ್-ವಕೀಲರ ಗಲಾಟೆ ಪ್ರಕರಣ; ವಕೀಲರ ವಿರುದ್ಧ 4 ಎಫ್‌ಐಆರ್‌

Date:

ಯುವ ವಕೀಲ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ, ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.

- Advertisement -

ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ಧರಿಸದ ಕಾರಣಕ್ಕೆ ಪೊಲೀಸರು ವಕೀಲರೊಬ್ಬರನ್ನು ಥಳಿಸಿದ್ದರು. ಈ ಕ್ರಮ ಖಂಡಿಸಿ ವಕೀಲರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಹೈಕೋರ್ಟ್‌ ಕಲಾಪ ಬಹಿಷ್ಕಾರಕ್ಕೂ ಮುಂದಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಹೈಕೋರ್ಟ್ ಸಿಜೆ, ವಕೀಲರನ್ನು ಮನವೊಲಿಸಿದ್ದು, ಕಲಾಪ ಬಹಿಷ್ಕರಿಸುವುದು ಸರಿಯಲ್ಲ ಎಂಬುದಾಗಿ ಹೇಳುವ ಮೂಲಕ, ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ಸೂಚಿಸಿತ್ತು. ಈ ಹಿನ್ನಲೆಯಲ್ಲಿ 6 ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿ, ಆ ಬಳಿಕ ಅವರನ್ನು ಅಮಾನತು ಕೂಡ ಮಾಡಿದ್ದರು.

ಪೊಲೀಸರನ್ನು ಅಮಾನತುಗೊಳಿಸಿದ ಕ್ರಮ ಖಂಡಿಸಿ ರಾತ್ರೋ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿಸಿದ್ದು, ಹಲ್ಲೆ ನಡೆಸಿದವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಒತ್ತಾಯಿಸಿದರು. ಈ ಪ್ರತಿಭಟನಾಕಾರರನ್ನು ಮನವೊಲಿಸಿದ ಎಸ್‌ಪಿ, ಅವರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಹೀಗಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಇದೀಗ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ಮಂದಿ ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಾಲ್ಕು ರಾಜ್ಯಗಳಲ್ಲಿ ಫಲಿತಾಂಶ – ಬಿಜೆಪಿ ಮುನ್ನಡೆ: ವಿಪಕ್ಷ ನಾಯಕ ಆರ್ ಅಶೋಕ್

ಈ ಪ್ರತಿಭಟನೆಯಲ್ಲಿ ಪೋಲಿಸ್ ಸಂಘ ಸ್ಥಾಪನೆಯ ಕೂಗು ಕೇಳಿಬಂದಿದೆ. ಪೊಲೀಸ್ ಸಿಬ್ಬಂದಿಗಳು ನಮಗೂ ಸಂಘ ಬೇಕು ಎಂದು ಚರ್ಚೆ ನಡೆಸಿದರು. ಪೋಲಿಸ್ ಸಂಘ ಸ್ಥಾಪನೆಗೆ ಈ ಹಿಂದೆ ಹಿರಿಯ ಅಧಿಕಾರಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಡಿಸೆಂಬರ್‌ 02ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಸಂಘ ಸ್ಥಾಪನೆಗೆ ಸಿದ್ದತೆ ನಡೆದಿದ್ದು, ಸಂಘವನ್ನು ರಿಜಿಸ್ಟರ್ ಮಾಡಿಸುವ ಬಗ್ಗೆ ಚರ್ಚೆ ನಡೆದಿದೆ. ಸೋಮವಾರ ರಿಜಿಸ್ಟರ್ ಮಾಡಿಸುವ ಸಾಧ್ಯತೆಯೂ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...