ಎಐಸಿಸಿ ಕರೆ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ದಿನಾಂಕ 05 -11-26 ರ ಗುರುವಾರದಂದು ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಪಿ ಮಂಜೇಗೌಡ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಅಂದು ಚಿಕ್ಕಮಗಳೂರಿನ ಆಜಾದ್ ಮೈದಾನದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಪಿ ಮಂಜೇಗೌಡ ಅವರು ಕರೆ ನೀಡಿದ್ದಾರೆಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಸಿ ಶಿವಾನಂದ ಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಇದಿದ್ದೀರಾ?ಚಿಕ್ಕಮಗಳೂರು | ಸಚಿವ ಯತೀಂದ್ರ ಸಿದ್ದರಾಮಯ್ಯ ರಾಜಮನೆತನಕ್ಕೆ ಅವಹೇಳನಕಾರಿ ಹೇಳಿಕೆ; ಅರಸು ಸಂಘ ಖಂಡನೆ
ಈ ಪ್ರತಿಭಟನೆಗೆ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು,ನಿಗಮ ಮಂಡಳಿ ನಾಮಿನಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂ.ಸಿ ಶಿವಾನಂದ ಸ್ವಾಮಿ ತಿಳಿಸಿದ್ದಾರೆ.




