ಚಿಕ್ಕಮಗಳೂರು | ದರ್ಗಾದಲ್ಲಿ ಭಕ್ತರಿಗೆ ಅಡ್ಡಿ: ಮುಜರಾಯಿ ಅಧಿಕಾರಿ ಅಮಾನತ್ತಿಗೆ ಎಸ್‌ಡಿಪಿಐ ಆಗ್ರಹ

Date:

ಪವಿತ್ರ ರಂಝಾನ್ ಹಬ್ಬದ ಮರುದಿನ ಬಾಬಾ ಬುಡನ್ ಗಿರಿ ದರ್ಗಾ ಝಿಯಾರತ್‌ಗೆ ತೆರಳಿದ ದರ್ಗಾ ವಂಶಸ್ಥರಾದ ಫಖ್ರುದ್ದೀನ್ ಶಾ ಖಾದ್ರಿ ಹಾಗೂ ಅನೇಕ ಭಕ್ತರಿಗೆ ಮುಜರಾಯಿ ಇಲಾಖೆಯ ಅಧಿಕಾರಿ ದರ್ಶನ್ ಮತ್ತು ಇತರ ಸಿಬ್ಬಂದಿ ಅಡ್ಡಿಪಡಿಸಿದ ಘಟನೆ ಬಗ್ಗೆ ಎಸ್‌ಡಿಪಿಐ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಮುಸ್ತಫ ಅಲ್ದೂರು ತಿಳಿಸಿದರು.

- Advertisement -

ಪ್ರತಿ ವರ್ಷವೂ ರಂಝಾನ್ ಹಾಗೂ ಈದ್ ಹಬ್ಬದ ಮರುದಿನ, ಭಕ್ತರು ತಮ್ಮ ಪೂರ್ವಜರ ಗೊರಿಗಳ ದರ್ಶನ ಮಾಡುವುದು ಮತ್ತು ಕಬ್ರಸ್ತಾನದಲ್ಲಿ ಹೂಗಳನ್ನು ಸಮರ್ಪಿಸುವುದು ನಡೆದುಬಂದ ಧಾರ್ಮಿಕ ಸಂಪ್ರದಾಯವಾಗಿದೆ. ಈ ಸಂಪ್ರದಾಯವನ್ನು ತಡೆಯುವುದು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ನೇರ ಹಲ್ಲೆಯಾಗಿದೆ. ಕಬ್ರಸ್ತಾನ್ ಹಾಗೂ ಗೊರಿಗಳ ದರ್ಶನಕ್ಕೆ ಅವಕಾಶ ನೀಡದೆ, ಭಕ್ತರು ತಂದಿದ್ದ ಹೂಗಳನ್ನು ಸಮರ್ಪಿಸಲು ತಡೆದು, ಸುಮಾರು 3 ಗಂಟೆಗಳ ಕಾಲ ಗೇಟ್ ಬಳಿ ನಿಲ್ಲಿಸಿ ಧಾರ್ಮಿಕ ಗುರುಗಳು ಮತ್ತು ಭಕ್ತರನ್ನು ಅವಮಾನಿಸಿರುವುದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಮುಸ್ತಾಫ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಘಟನೆಯು ಮುಸ್ಲಿಂ ಸಮುದಾಯದ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ. ಇಂತಹ ಘಟನೆಯನ್ನು ಖಂಡಿಸಿ, ದರ್ಗಾ ಗೇಟ್ ಮುಂಭಾಗದಲ್ಲಿ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷರಾದ ಮುಸ್ತಫ ಅಲ್ದೂರು ಅವರ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ತೀವ್ರ ಪ್ರತಿಭಟನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಮುಜರಾಯಿ ಅಧಿಕಾರಿ ದರ್ಶನ್ ಅವರನ್ನು ತಕ್ಷಣವೇ ಅಮಾನತ್ತು ಮಾಡಬೇಕು. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಭಕ್ತರಿಗೆ ಯಾವುದೇ ಅಡ್ಡಿಯಿಲ್ಲದೆ ತಮ್ಮ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ; ಜೋಳದಾಳು ಗ್ರಾಮಸ್ಥರ ಆಗ್ರಹ

ಒಂದು ವೇಳೆ ನಮ್ಮ ಮನವಿಗೆ ತಕ್ಷಣ ಸ್ಪಂದನೆ ದೊರೆಯದಿದ್ದರೆ, ಎಸ್‌ಡಿಪಿಐ ಪಕ್ಷದ ವತಿಯಿಂದ ಜಿಲ್ಲಾದ್ಯಂತ ತೀವ್ರ ಹೋರಾಟ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಸ್ ಡಿಪಿಐ ಜಿಲ್ಲಾಧ್ಯಕ್ಷ ಮುಸ್ತಾಫ ಆಲ್ದೂರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...