ಚಿಕ್ಕಮಗಳೂರು |  ಸೇವಾ ಇಲಾಖೆ: ‘ಪ್ರಜಾಸೇವಾ ಆಂದೋಲನ’ ಜನಸಂಪರ್ಕ ಸಭೆ 

Date:

ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ ಗ್ರಾಮದ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಪ್ರಜಾ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರಜಾಸೇವಾ ಆಂದೋಲನ’ ಜನಸಂಪರ್ಕ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಮಳೆ ಅಭಾವದಿಂದಾಗಿ ಈ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಈ ಕುರಿತು ಸದನದಲ್ಲೂ ಧ್ವನಿ ಎತ್ತಲಾಗಿದ್ದು, ಶಾಶ್ವತ ನೀರಾವರಿ ಯೋಜನೆಗಳ ಮೂಲಕ ನೀರು ಒದಗಿಸಲು ಸರ್ಕಾರ ಮತ್ತು ಶಾಸಕರು ಶ್ರಮಿಸಬೇಕಿದೆ ಎಂದು ಹೇಳಿದರು.

- Advertisement -

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ಪ್ರತಿ ಶನಿವಾರ ನಡೆಯುವ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ಪ್ರಗತಿಯನ್ನು ಪ್ರತಿ ಬುಧವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಸಿ ಇಲಾಖಾವಾರು ಪರಿಶೀಲಿಸಲಾಗುತ್ತಿದೆ. ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮಒನ್ ಮೂಲಕ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳಿಗೆ ಜಿಆರ್ ಎಸ್‌ ಐಪಿ ಸಂಖ್ಯೆ ನೀಡಲಾಗುತ್ತಿದ್ದು, ಅರ್ಜಿಗಳ ಸ್ಥಿತಿಗತಿಯನ್ನು ನಿರಂತರವಾಗಿ ಟ್ರ್ಯಾಕ್‌ ಮಾಡಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರ ಯೋಜನೆ, ಸವಲತ್ತುಗಳು ನೇರ ಜನರ ಮನೆಬಾಗಿಲಿಗೆ ತಲುಪಬೇಕು; ಹೆಚ್. ಡಿ ತಮ್ಮಯ್ಯ 

ಸಭೆಯಲ್ಲಿ ಸ್ವೀಕರಿಸಲಾದ 30ಕ್ಕೂ ಹೆಚ್ಚು ಅರ್ಜಿಗಳನ್ನು ಶಾಸಕರು ಸಾರ್ವಜನಿಕರ ಸಮ್ಮುಖದಲ್ಲೇ ಪರಿಶೀಲಿಸಿ ಸೂಕ್ತ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಎಸ್.ಕೀರ್ತನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಬೋರಯ್ಯ, ತಾಲ್ಲೂಕು ಪಂಚಾಯಿತಿ ಇಒ ವಿಜಯಕುಮಾರ್, ಬಗರ್ ಹುಕುಂ ಸಮಿತಿ ಸದಸ್ಯರಾದ ಕೆಂಗೇಗೌಡ, ಶಂಕರ್ ನಾಯಕ್, ಕೆಡಿಪಿ ಸದಸ್ಯ ಸಂತೋಷ್ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...